ನವದೆಹಲಿ: 24 ಗಂಟೆಗಳಲ್ಲಿ ದೇಶಾದ್ಯಂತ 44,230 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ತಿಳಿಸಿದೆ.
ಇದೇ ವೇಳೆ 42,360 ಮಂದಿ ಕಳೆದ 24 ತಾಸಿನಲ್ಲಿ ಗುಣಮುಖರಾಗಿದ್ದಾರೆ. ದೇಶದಲ್ಲಿ ಒಟ್ಟು 4,05,155 ಸಕ್ರಿಯ ಪ್ರಕರಣಗಳಿವೆ. ಇಲ್ಲಿಯವರೆಗೆ 3,07,43,972 ಮಂದಿ ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 555 ಮಂದಿ ಸಾವನ್ನಪ್ಪಿದ್ದಾರೆ. ಇಲ್ಲಿಯವರೆಗೆ ಒಟ್ಟು 4,23,217 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಇಲ್ಲಿಯವರೆಗೆ 45,60,33,754 ಡೋಸ್ ಲಸಿಕೆ ನೀಡಲಾಗಿದೆ.