Wednesday, March 25, 2026
Wednesday, March 25, 2026

ಕೋವಿಡ್-19: 75 ದಿನಗಳ ನಂತರ ಅತ್ಯಂತ ಕಡಿಮೆ ಪಾಸಿಟಿವ್ ಪ್ರಕರಣ

ಕೋವಿಡ್-19: 75 ದಿನಗಳ ನಂತರ ಅತ್ಯಂತ ಕಡಿಮೆ ಪಾಸಿಟಿವ್ ಪ್ರಕರಣ

Date:

24 ಗಂಟೆಗಳಲ್ಲಿ ದೇಶಾದ್ಯಂತ 60,471 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗುವ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 2,95,70,881 ಕ್ಕೆ ಏರಿದೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ತಿಳಿಸಿದೆ. ತನ್ಮೂಲಕ ಕಳೆದ 75 ದಿನಗಳ ನಂತರ ಅತ್ಯಂತ ಕಡಿಮೆ ದೈನಂದಿನ ಪಾಸಿಟಿವ್ ಪ್ರಕರಣ ವರದಿಯಾಗಿದೆ.

ಇದೇ ವೇಳೆ 1,17,525 ಮಂದಿ ಕಳೆದ 24 ತಾಸಿನಲ್ಲಿ ಗುಣಮುಖರಾಗಿದ್ದಾರೆ. ದೇಶದಲ್ಲಿ ಒಟ್ಟು 9,13,378 ಸಕ್ರಿಯ ಪ್ರಕರಣಗಳಿವೆ. ಇಲ್ಲಿಯವರೆಗೆ 2,82,80,472 ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 2726 ಮಂದಿ ಸಾವನ್ನಪ್ಪಿದ್ದಾರೆ, ಇಲ್ಲಿಯವರೆಗೆ ಒಟ್ಟು 3,77,031 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಇಲ್ಲಿಯವರೆಗೆ ಒಟ್ಟು 25,90,44,072 ಡೋಸ್ ಲಸಿಕೆ ನೀಡಲಾಗಿದೆ.

ದೇಶದ ಚೇತರಿಕೆ ಪ್ರಮಾಣವು ಶೇ. 95.64 ಕ್ಕೆ ಏರಿದೆ. ವಾರದ ಪಾಸಿಟಿವಿಟಿ ಪ್ರಮಾಣವು ಗಣನೀಯ ಕುಸಿತ ಕಂಡಿದ್ದು ಶೇ. 4.39 ರಷ್ಟು ಇದೆ. ದೈನಂದಿನ ಪಾಸಿಟಿವಿಟಿ ಪ್ರಮಾಣವು ಶೇ. 3.45 ಇದೆ. ಸತತ 8 ದಿನಗಳಿಂದ ದೈನಂದಿನ ಪಾಸಿಟಿವಿಟಿ ಪ್ರಮಾಣವು ಶೇ. 5 ಕ್ಕಿಂತ ಕಡಿಮೆಯಿದೆ.

ಜೂನ್ 14 ರಂದು 17,51,358 ಮಾದರಿಗಳನ್ನು ಸಂಗ್ರಹಿಸಿ ಕೋವಿಡ್ ಪರೀಕ್ಷೆಗೆ ಕಳುಹಿಸಲಾಗಿದೆ. ಇಲ್ಲಿಯವರೆಗೆ 38,13,75,984 ಮಾದರಿಗಳನ್ನು ಪರೀಕ್ಷಿಸಲಾಗಿದೆ ಎಂದು ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ ಮಾಹಿತಿ ನೀಡಿದೆ. 

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಇತರ ದೇಶಗಳ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಲು ಸರ್ಕಾರ ನಿರಂತರವಾಗಿ ಪ್ರಯತ್ನಗಳನ್ನು ಮಾಡಿದೆ: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ, ಮಾ.24: ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದ ಕುರಿತು ರಾಜ್ಯಸಭೆಯಲ್ಲಿ ಮಂಗಳವಾರ...

ಇನ್ಸಿಡೆಂಟ್ 2026: ನಿಟ್ಟೆ ವಿದ್ಯಾರ್ಥಿಗಳಿಗೆ ಬಹುಮಾನ

ಕಾರ್ಕಳ, ಮಾ.24: ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ಆಯೋಜಿಸಿದ ವಾರ್ಷಿಕ...

ಆಸ್ಟ್ರೋ ಮೋಹನ್ ಅವರಿಗೆ ಅಂತರರಾಷ್ಟ್ರೀಯ ಗೌರವ

ಉಡುಪಿ, ಮಾ.23: ಅಂತರರಾಷ್ಟ್ರೀಯ ಖ್ಯಾತಿಯ ಹಿರಿಯ ಪತ್ರಿಕಾ ಛಾಯಾಗ್ರಾಹಕರು ಹಾಗೂ ಕ್ಯಾನನ್ ಇಓಎಸ್...
error: Content is protected !!