Saturday, September 5, 2026
Saturday, September 5, 2026

102 ದಿನಗಳ ನಂತರ ಅತ್ಯಂತ ಕಡಿಮೆ ಪಾಸಿಟಿವ್ ಪ್ರಕರಣ

102 ದಿನಗಳ ನಂತರ ಅತ್ಯಂತ ಕಡಿಮೆ ಪಾಸಿಟಿವ್ ಪ್ರಕರಣ

Date:

24 ಗಂಟೆಗಳಲ್ಲಿ ದೇಶಾದ್ಯಂತ 37,566 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗುವ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 3,03,16,897 ಕ್ಕೆ ಏರಿದೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ತಿಳಿಸಿದೆ. ಇದು 102 ದಿನಗಳ ನಂತರ ಅತ್ಯಂತ ಕಡಿಮೆ ಪಾಸಿಟಿವ್ ಪ್ರಕರಣವಾಗಿದೆ. 

ಇದೇ ವೇಳೆ 56,994 ಮಂದಿ ಕಳೆದ 24 ತಾಸಿನಲ್ಲಿ ಗುಣಮುಖರಾಗಿದ್ದಾರೆ. ದೇಶದಲ್ಲಿ ಒಟ್ಟು 5,52,659 ಸಕ್ರಿಯ ಪ್ರಕರಣಗಳಿವೆ. ಇಲ್ಲಿಯವರೆಗೆ 2,93,66,601 ಮಂದಿ ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 907 ಮಂದಿ ಸಾವನ್ನಪ್ಪಿದ್ದಾರೆ, ಇಲ್ಲಿಯವರೆಗೆ ಒಟ್ಟು 3,97,637 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. 

ದೇಶದ ಚೇತರಿಕೆ ಪ್ರಮಾಣ ನಿರಂತರವಾಗಿ ಏರಿಕೆಯನ್ನು ಕಾಣುತ್ತಿದ್ದು ಇದೀಗ ಶೇ. 96.87% ತಲುಪಿದೆ.

ಜೂನ್ 28 ರಂದು 17,68,008 ಮಾದರಿಗಳನ್ನು ಸಂಗ್ರಹಿಸಿ ಕೋವಿಡ್ ಪರೀಕ್ಷೆಗೆ ಕಳುಹಿಸಲಾಗಿದೆ. ಇಲ್ಲಿಯವರೆಗೆ 40,81,39,287 ಮಾದರಿಗಳನ್ನು ಪರೀಕ್ಷಿಸಲಾಗಿದೆ ಎಂದು ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ ಮಾಹಿತಿ ನೀಡಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಶ್ರೀ ಕೃಷ್ಣ ಮಠ: ಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ಅರ್ಘ್ಯ ಪ್ರದಾನ

ಉಡುಪಿ, ಸೆ.5: ಶ್ರೀ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ಶುಕ್ರವಾರ ಮಧ್ಯರಾತ್ರಿ ಚಂದ್ರೋದಯ...

ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ: ನಾವುಂದ ಸರಕಾರಿ ಪದವಿಪೂರ್ವ ಕಾಲೇಜಿಗೆ ಅವಳಿ ಪ್ರಶಸ್ತಿ

ಉಡುಪಿ, ಸೆ.4: ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಮತ್ತು ಸರಕಾರಿ...

ರಥಬೀದಿ ಕಾಲೇಜು: ಸಂಸ್ಕೃತ ದಿನಾಚರಣೆ

ಮಂಗಳೂರು, ಸೆ.3: ರಥಬೀದಿ ಕಾಲೇಜಿನಲ್ಲಿ ಸಂಸ್ಕೃತ ದಿನಾಚರಣೆ ಕಾರ್ಯಕ್ರಮ ಮಂಗಳೂರು ರಥಬೀದಿಯ...

ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕಾಗಿ ಸಹಾಯಧನ: ಅರ್ಜಿ ಆಹ್ವಾನ

ಉಡುಪಿ, ಸೆ.4: ಉಡುಪಿ, ಕಾಪು ಹಾಗೂ ಬ್ರಹ್ಮಾವರ ತಾಲೂಕುಗಳಿಗೆ ಸಂಬಂಧಿಸಿದಂತೆ ಅಡಿಕೆ...
error: Content is protected !!