Sunday, January 19, 2025
Sunday, January 19, 2025

ಹಿಂದುಳಿದ ವರ್ಗಗಳ ಸಬಲೀಕರಣಕ್ಕೆ ಪಣ ತೊಟ್ಟಿರುವ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ: ಯಶ್ಪಾಲ್ ಸುವರ್ಣ

ಹಿಂದುಳಿದ ವರ್ಗಗಳ ಸಬಲೀಕರಣಕ್ಕೆ ಪಣ ತೊಟ್ಟಿರುವ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ: ಯಶ್ಪಾಲ್ ಸುವರ್ಣ

Date:

ವಿಜಯವಾಡ: ದೇಶ ಸ್ವತಂತ್ರಗೊಂಡು 75 ವರ್ಷಗಳಲ್ಲಿ ಹಿಂದುಳಿದ ವರ್ಗಗಳ ಸಬಲೀಕರಣಕ್ಕೆ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಪಣತೊಟ್ಟು ವಿವಿಧ ಯೋಜನೆಗಳನ್ನು ರೂಪಿಸಿ ಪರಿಣಾಮಕಾರಿ ಅನುಷ್ಠಾನಕ್ಕೆ ಮುಂದಾಗಿದ್ದು, ಕೇಂದ್ರ ಸಚಿವ ಸಂಪುಟದಲ್ಲಿ 27 ಮಂದಿ ಹಿಂದುಳಿದ ವರ್ಗಗಳ ಸಚಿವರಿಗೆ ಅವಕಾಶ ನೀಡುವ ಮೂಲಕ ದೇಶದ ಶೇ. 55 ಮತದಾರರನ್ನು ಹೊಂದಿರುವ ಹಿಂದುಳಿದ ವರ್ಗಕ್ಕೆ ಗರಿಷ್ಠ ರಾಜಕೀಯ ಪ್ರಾತಿನಿಧ್ಯ ನೀಡಿದೆ ಎಂದು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ಪಾಲ್ ಸುವರ್ಣ ಹೇಳಿದರು.

ಆಂಧ್ರ ಪ್ರದೇಶದ ವಿಜಯವಾಡದಲ್ಲಿ ಆಯೋಜಿಸಿದ್ದ ಆಂಧ್ರಪ್ರದೇಶ ರಾಜ್ಯ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಹಿಂದುಳಿದ ವರ್ಗಗಳ ಮೋರ್ಚಾದ ಪದಾಧಿಕಾರಿಗಳನ್ನುದ್ದೇಶಿಸಿ ಅವರು ಮಾತನಾಡಿದರು.

ಕಾರ್ಯಕಾರಿಣಿ ಸಭೆಯಲ್ಲಿ ಆಂಧ್ರ ಪ್ರದೇಶ ಬಿಜೆಪಿ ರಾಜ್ಯಾಧ್ಯಕ್ಷ ಸೋಮವೀರ ರಾಜು, ಮೋರ್ಚಾದ ರಾಷ್ಟ್ರೀಯ ಕಾರ್ಯದರ್ಶಿ ಡಾ. ಪಾರ್ಥಸಾರಥಿ, ಆಂಧ್ರ ಒಬಿಸಿ ಮೋರ್ಚಾದ ರಾಜ್ಯಾಧ್ಯಕ್ಷ ಗೋಪಿ ಶ್ರೀನಿವಾಸ್, ಮೋರ್ಚಾದ ಪದಾಧಿಕಾರಿಗಳು ಹಾಗೂ ಪಕ್ಷದ ವಿವಿಧ ಮುಖಂಡರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ ಸರ್ಕಲ್ ನಲ್ಲಿ ಬ್ಯಾರಿಕೇಡ್ ಅಳವಡಿಸಿರುವುದು ಅವೈಜ್ಞಾನಿಕ ಕ್ರಮ: ಮಾಜಿ ಶಾಸಕ ರಘುಪತಿ ಭಟ್

ಉಡುಪಿ, ಜ.19: ಅಂಬಾಗಿಲು - ಗುಂಡಿಬೈಲು ಮಾರ್ಗವಾಗಿ ಉಡುಪಿ ನಗರ ಪ್ರವೇಶಿಸುವ...

ಜ.27: ತೆಂಕನಿಡಿಯೂರು ಕಾಲೇಜಿನಲ್ಲಿ ಡಾ. ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರ

ಉಡುಪಿ, ಜ.18: ಕರ್ನಾಟಕ ಸರಕಾರದ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ...

ಮಣಿಪಾಲ ಕೆ.ಎಂ.ಸಿ: ಗೋಲ್- ಡೈರೆಕ್ಟೆಡ್ ಬ್ಲೀಡಿಂಗ್ ಮ್ಯಾನೇಜ್ಮೆಂಟ್ ವಿಚಾರ ಸಂಕಿರಣ

ಮಣಿಪಾಲ, ಜ.19: ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಇಮ್ಯುನೊಹೆಮಟಾಲಜಿ...

ಕಲ್ಸಂಕ ಜಂಕ್ಷನ್ ಸುಗಮ ಸಂಚಾರ ವ್ಯವಸ್ಥೆ ಬಗ್ಗೆ ಜಿಲ್ಲಾಧಿಕಾರಿ ಜೊತೆ ಶಾಸಕ ಯಶ್ಪಾಲ್ ಸುವರ್ಣ ಸಮಾಲೋಚನೆ

ಉಡುಪಿ, ಜ.19: ಕಲ್ಸಂಕ ಜಂಕ್ಷನ್ ನಲ್ಲಿ ಬ್ಯಾರಿಕೇಡ್ ಅಳವಡಿಸಿ ಆಂಬಾಗಿಲು ಭಾಗದ...
error: Content is protected !!