Wednesday, January 22, 2025
Wednesday, January 22, 2025

ಯುವಕ ಸಮುದ್ರ ಪಾಲು

ಯುವಕ ಸಮುದ್ರ ಪಾಲು

Date:

ಕಣ್ಣೂರು: ಯುವಕನೊಬ್ಬ ಸಮುದ್ರ ಪಾಲಾದ ಘಟನೆ ಕೇರಳದ ಕಣ್ಣೂರು ಬೀಚ್ ನಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಕೊಡಗು ಜಿಲ್ಲೆಯ ಮಡಿಕೇರಿ ನಗರದ ಜಲಾಶಯ ಬಡಾವಣೆ ನಿವಾಸಿ ಶಶಾಂಕ್ (25) ಎಂದು ಗುರುತಿಸಲಾಗಿದೆ. ಕಣ್ಣೂರು ಬೀಚ್ ನಲ್ಲಿ ಯುವಕ ಗುಂಪೊಂದು ಈಜಲು ತೆರಳಿದ್ದ ವೇಳೆ ಶಶಾಂಕ್ ಸಮುದ್ರದಲ್ಲಿ ಮುಳುಗಿ ಮೃತಪಟ್ಟಿದ್ದಾನೆ.

ಸಮುದ್ರದ ಅಲೆಗೆ ಸಿಕ್ಕಿ ಕೊಚ್ಚಿ ಹೋಗುತ್ತಿದ್ದ ಇಬ್ಬರು ಯುವಕರನ್ನು ಸ್ಥಳೀಯರು ರಕ್ಷಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಕೇರಳದ ಕಣ್ಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿ.ಸೂ: ಪ್ರವಾಸಿ ಸ್ಥಳಗಳಲ್ಲಿ (ಮುಖ್ಯವಾಗಿ ಬೀಚ್ ಗಳಲ್ಲಿ) ಸ್ಥಳೀಯಾಡಳಿತದಿಂದ ಅಳವಡಿಸಲಾದ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಿ. ಈಜುವುದನ್ನು ನಿಷೇಧಿಸಿರುವ ಕಡೆಗಳಲ್ಲಿ ಈಜಲು ಹೋಗಬೇಡಿ. ನೆನಪಿಡಿ, ನಿಮ್ಮ ಜೀವ ಮತ್ತು ಜೀವನ ಎರಡೂ ಮುಖ್ಯ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಪ್ಪೂರು: ರಾಷ್ಟ್ರೀಯ ಹೆದ್ದಾರಿ ಇಕ್ಕೆಲಗಳಲ್ಲಿ ತ್ಯಾಜ್ಯದ ರಾಶಿ; ಉಡುಪಿ ಜಿಲ್ಲೆಯ ಸ್ವಚ್ಛತೆಗೆ ಇದೊಂದು ದೊಡ್ಡ ಕಪ್ಪುಚುಕ್ಕೆ

ಉಪ್ಪೂರು, ಜ.21: ಒಂದೆಡೆ ದೇಶಾದ್ಯಂತ ಸ್ವಚ್ಛತೆಯ ಕಾಳಜಿಯ ಬಗ್ಗೆ ಸರಣಿ ಕಾರ್ಯಕ್ರಮಗಳು...

ಪಾಳೆಕಟ್ಟೆ: ನೂತನ ಬಸ್ಸು ತಂಗುದಾಣಕ್ಕೆ ಭೂಮಿ ಪೂಜೆ

ಕೊಡವೂರು, ಜ.21: ಕೊಡವೂರು ವಾರ್ಡಿನ ಪಾಳೆಕಟ್ಟೆಯಲ್ಲಿ ಬಸ್ಸು ತಂಗುದಾಣಕ್ಕೆ ನಗರಸಭಾ ಸದಸ್ಯರಾದ...

ಸಂಚಾರ ಪ್ರಜ್ಞೆಯು ಜೀವನದ ಭಾಗವಾಗಬೇಕು: ಮನೋಹರ್ ಹೆಚ್ ಕೆ

ಮಣಿಪಾಲ, ಜ.21: ಮಾಹೆಯ ಎಂಐಟಿ, ಎನ್‌ಎಸ್‌ಎಸ್ ಘಟಕಗಳು, ಉಡುಪಿ ಜಿಲ್ಲಾ ಪೊಲೀಸ್​...
error: Content is protected !!