Home ಸುದ್ಧಿಗಳು ರಾಷ್ಟ್ರೀಯ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡಲು ಎನ್‌ಡಿಎ ಸರ್ಕಾರ ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದೆ: ಪ್ರಧಾನಿ ನರೇಂದ್ರ...

ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡಲು ಎನ್‌ಡಿಎ ಸರ್ಕಾರ ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದೆ: ಪ್ರಧಾನಿ ನರೇಂದ್ರ ಮೋದಿ

117
0

ಜಮುಯಿ, (ಬಿಹಾರ) ಏ.4: ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡಲು ಎನ್‌ಡಿಎ ಸರ್ಕಾರ ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಬಿಹಾರದ ಜಮುಯಿಯಲ್ಲಿ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಅವರು, ಚಂದ್ರನ ದಕ್ಷಿಣ ಧ್ರುವದಲ್ಲಿ ಬಾಹ್ಯಾಕಾಶ ನೌಕೆಯನ್ನು ಯಶಸ್ವಿಯಾಗಿ ಇಳಿಸಿದ ಮೊದಲ ದೇಶ ಭಾರತವಾಗಿದೆ. ಭಾರತವು ವಿಶ್ವದ ಐದನೇ ಅತಿದೊಡ್ಡ ಆರ್ಥಿಕತೆಯಾಗಿದೆ. ಭಯೋತ್ಪಾದಕ ಚಟುವಟಿಕೆಗಳನ್ನು ಬೆಂಬಲಿಸುವ ಮತ್ತು ತೊಡಗಿಸಿಕೊಳ್ಳುವವರಿಗೆ ಭಾರತವೂ ತಕ್ಕ ಪ್ರತ್ಯುತ್ತರ ನೀಡುತ್ತಿದೆ ಎಂದು ಅವರು ಹೇಳಿದರು. ಹಿಂದಿನ ಮೈತ್ರಿ ಸರ್ಕಾರಗಳ ಅವಧಿಯಲ್ಲಿ ಶಿಥಿಲಗೊಂಡ ರೈಲುಗಳು ಮಾತ್ರ ಓಡುತ್ತಿದ್ದವು, ಆದರೆ ಈಗ ಇಡೀ ದೇಶದಂತೆಯೇ ಬಿಹಾರದವರೂ ವಂದೇ ಭಾರತ್ ರೈಲಿನಲ್ಲಿ ಪ್ರಯಾಣಿಸುತ್ತಿದ್ದಾರೆ ಎಂದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.