ನವದೆಹಲಿ: ದೇಶಾದ್ಯಂತ ದೈನಂದಿನ ಪಾಸಿಟಿವ್ ಪ್ರಕರಣ ದ್ವಿಗುಣಗೊಳ್ಳುತ್ತಿದ್ದು ಮುಂದಿನ ಎರಡು ವಾರಗಳು ನಿರ್ಣಾಯಕವಾಗಲಿದೆ.
ಜನವರಿ ತಿಂಗಳ ಅಂತ್ಯದೊಳಗೆ ದೇಶಾದ್ಯಂತ ಹೆಚ್ಚಿನ ಜನರು ಸೋಂಕಿತರಾಗಲಿದ್ದಾರೆ. ಪ್ರತಿಯೊಬ್ಬರೂ ಗಂಭೀರವಾಗಿ ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸಬೇಕು ಎಂದು ತಜ್ಞರು ಹೇಳಿದ್ದಾರೆ.
ದೇಶಾದ್ಯಂತ ಇಂದು 58,097 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು 534 ಮಂದಿ ಸಾವನ್ನಪ್ಪಿದ್ದಾರೆ. ಇದೇ ವೇಳೆ 15,389 ಮಂದಿ ಕಳೆದ 24 ತಾಸಿನಲ್ಲಿ ಗುಣಮುಖರಾಗಿದ್ದಾರೆ. ದೇಶದಲ್ಲಿ ಒಟ್ಟು 2,14,004 ಸಕ್ರಿಯ ಪ್ರಕರಣಗಳಿವೆ.
ರಾಜ್ಯದಲ್ಲಿಂದು 4246 ಮಂದಿ ಸೋಂಕಿಗೆ ಒಳಗಾಗಿದ್ದಾರೆ. 362 ಮಂದಿ ಗುಣಮುಖರಾಗಿದ್ದಾರೆ. ಇಬ್ಬರು ಸೋಂಕಿನಿಂದ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 17,414 ಸಕ್ರಿಯ ಪ್ರಕರಣಗಳಿವೆ.
ಬೆಂಗಳೂರು ನಗರದಲ್ಲಿ ಅತ್ಯಧಿಕ 3605 ಪ್ರಕರಣಗಳು ಪತ್ತೆಯಾಗಿದ್ದು, ಎರಡನೆ ಅತಿ ಹೆಚ್ಚು ಪ್ರಕರಣ ದಕ್ಷಿಣ ಕನ್ನಡದಲ್ಲಿ (111) ಕಂಡುಬಂದಿದ್ದು, ಮೂರನೇ ಅತಿ ಹೆಚ್ಚು ಪ್ರಕರಣ ಉಡುಪಿ (88) ಜಿಲ್ಲೆಯಲ್ಲಿ ಪತ್ತೆಯಾಗಿದೆ.
ವಿಶೇಷ ಸೂಚನೆ: ಮನೆಯಿಂದ ಹೊರಗಡೆ ಹೋಗುವಾಗ, ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಿ. ವ್ಯಕ್ತಿಗತ ಅಂತರವನ್ನು ಕಾಯ್ದುಕೊಳ್ಳಿ, ಕೈಗಳ ಸ್ವಚ್ಛತೆಯನ್ನು ಕಾಪಾಡಿಕೊಳ್ಳಿ, ಲಸಿಕೆ ಪಡೆಯದವರನ್ನು ಲಸಿಕೆ ಪಡೆಯುವಂತೆ ಮನವೊಲಿಸಿ, ಸರ್ಕಾರದ ಕೊರೊನಾ ಮಾರ್ಗಸೂಚಿಗಳನ್ನು ಪಾಲಿಸಿ.