Sunday, January 19, 2025
Sunday, January 19, 2025

ಕೋಟಿ ಡೋಸ್ ಲಸಿಕೆ- ದಾಖಲೆ ನಿರ್ಮಿಸಿದ ಭಾರತ

ಕೋಟಿ ಡೋಸ್ ಲಸಿಕೆ- ದಾಖಲೆ ನಿರ್ಮಿಸಿದ ಭಾರತ

Date:

ನವದೆಹಲಿ: ಕೊರೊನಾ ವಿರುದ್ಧದ ಹೋರಾಟದಲ್ಲಿ ಭಾರತ ಜಾಗತಿಕ ಮಟ್ಟದಲ್ಲಿ ನೂತನ ದಾಖಲೆ ನಿರ್ಮಿಸಿದ್ದು ಒಂದೇ ದಿನ ಒಂದು ಕೋಟಿಗಿಂತ ಹೆಚ್ಚು ಡೋಸ್ ಲಸಿಕಾಕರಣ ನಡೆದಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ಆಗಸ್ಟ್ 27ರಂದು ದೇಶಾದ್ಯಂತ ಬ್ರಹತ್ ಲಸಿಕಾ ಮೇಳ ನಡೆದಿದ್ದು ಒಟ್ಟು 1,00,63,931 ಡೋಸ್ ಲಸಿಕೆ ನೀಡಲಾಗಿದೆ.

ಉತ್ತರ ಪ್ರದೇಶದಲ್ಲಿ ಅತಿ ಹೆಚ್ಚು 28,62,649 ಡೋಸ್ ಲಸಿಕಾಕರಣ ನಡೆದಿದ್ದು, ನಂತರದ ಸ್ಥಾನದಲ್ಲಿ ಕರ್ನಾಟಕ ಇದೆ. ರಾಜ್ಯದಲ್ಲಿ ಶುಕ್ರವಾರ ಒಟ್ಟು 10,79,588 ಡೋಸ್ ಲಸಿಕೆ ನೀಡಲಾಗಿದೆ. ಮೂರನೇ ಸ್ಥಾನದಲ್ಲಿರುವ ಮಹಾರಾಷ್ಟ್ರದಲ್ಲಿ 9,84,117 ಡೋಸ್ ಲಸಿಕಾಕರಣ ನಡೆದಿದೆ.

ಪ್ರಧಾನಿ ಅಭಿನಂದನೆ: ಒಂದು ಕೋಟಿ ಲಸಿಕೆ ಗುರಿಯನ್ನು ಯಶಸ್ವಿಯಾಗಿ ದಾಟುವುದು ಅದೊಂದು ಸ್ಮರಣೀಯ ಸಾಧನೆಯಾಗಿದೆ. ಲಸಿಕೆ ಪಡೆದುಕೊಂಡವರಿಗೂ ಲಸಿಕಾಕರಣಕ್ಕೆ ಸಹಕರಿಸಿದ ಎಲ್ಲಾ ಕೊರೊನಾ ಸೇನಾನಿಗಳಿಗೂ ಅಭಿನಂದನೆಗಳು. ನಿಮ್ಮೆಲ್ಲರ ಪ್ರಯತ್ನಗಳಿಂದ ಇದು ಸಾಧ್ಯವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮೂಲಕ ಹರ್ಷ ವ್ಯಕ್ತಪಡಿಸಿದ್ದಾರೆ.

ಹರ್ಷ ವ್ಯಕ್ತಪಡಿಸಿದ ಗೃಹ ಸಚಿವ ಅಮಿತ್ ಶಾ: ಕೇವಲ ಒಂದೇ ದಿನದಲ್ಲಿ ಕೋಟಿ ಡೋಸ್ ಲಸಿಕೆ! ಈ ಅಂಕಿ ಅಂಶವು ನವಭಾರತದ ಬಲವಾದ ಇಚ್ಛಾಶಕ್ತಿ ಮತ್ತು ಅಪಾರ ಸಾಮರ್ಥ್ಯದ ಪ್ರತಿಬಿಂಬವಾಗಿದೆ. ಒಂದು ದೇಶವು ಹೇಗೆ ದೂರದೃಷ್ಟಿಯ ಮತ್ತು ಪರಿಶ್ರಮದ ನಾಯಕತ್ವದೊಂದಿಗೆ ಕೋವಿಡ್ ವಿರುದ್ಧ ಯಶಸ್ವಿಯಾಗಿ ಹೋರಾಡುವಲ್ಲಿ ಒಂದು ಉದಾಹರಣೆಯನ್ನು ನೀಡಬಹುದು ಎಂಬುದನ್ನು ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವದಲ್ಲಿ ಜಗತ್ತಿಗೆ ತೋರಿಸಲಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಟ್ವೀಟ್ ಮಾಡಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ 40,330 ಡೋಸ್:
ಉಡುಪಿ ಜಿಲ್ಲೆಯಲ್ಲಿ ಲಸಿಕಾ ಮೇಳದಲ್ಲಿ 40,330 ಡೋಸ್ ಲಸಿಕೆ ನೀಡಲಾಗಿದೆ. ಸಹಕರಿಸಿದ ಎಲ್ಲಾ ವೈದ್ಯರಿಗೆ ಹಾಗೂ ಆರೋಗ್ಯ ಸಿಬ್ಬಂದಿಗಳಿಗೆ ಜಿಲ್ಲಾಡಳಿತದ ತುಂಬು ಹೃದಯದ ಧನ್ಯವಾದಗಳು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಕೊರೊನಾ ಸೇನಾನಿಗಳಿಗೆ ಅಭಿನಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ ಸರ್ಕಲ್ ನಲ್ಲಿ ಬ್ಯಾರಿಕೇಡ್ ಅಳವಡಿಸಿರುವುದು ಅವೈಜ್ಞಾನಿಕ ಕ್ರಮ: ಮಾಜಿ ಶಾಸಕ ರಘುಪತಿ ಭಟ್

ಉಡುಪಿ, ಜ.19: ಅಂಬಾಗಿಲು - ಗುಂಡಿಬೈಲು ಮಾರ್ಗವಾಗಿ ಉಡುಪಿ ನಗರ ಪ್ರವೇಶಿಸುವ...

ಜ.27: ತೆಂಕನಿಡಿಯೂರು ಕಾಲೇಜಿನಲ್ಲಿ ಡಾ. ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರ

ಉಡುಪಿ, ಜ.18: ಕರ್ನಾಟಕ ಸರಕಾರದ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ...

ಮಣಿಪಾಲ ಕೆ.ಎಂ.ಸಿ: ಗೋಲ್- ಡೈರೆಕ್ಟೆಡ್ ಬ್ಲೀಡಿಂಗ್ ಮ್ಯಾನೇಜ್ಮೆಂಟ್ ವಿಚಾರ ಸಂಕಿರಣ

ಮಣಿಪಾಲ, ಜ.19: ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಇಮ್ಯುನೊಹೆಮಟಾಲಜಿ...

ಕಲ್ಸಂಕ ಜಂಕ್ಷನ್ ಸುಗಮ ಸಂಚಾರ ವ್ಯವಸ್ಥೆ ಬಗ್ಗೆ ಜಿಲ್ಲಾಧಿಕಾರಿ ಜೊತೆ ಶಾಸಕ ಯಶ್ಪಾಲ್ ಸುವರ್ಣ ಸಮಾಲೋಚನೆ

ಉಡುಪಿ, ಜ.19: ಕಲ್ಸಂಕ ಜಂಕ್ಷನ್ ನಲ್ಲಿ ಬ್ಯಾರಿಕೇಡ್ ಅಳವಡಿಸಿ ಆಂಬಾಗಿಲು ಭಾಗದ...
error: Content is protected !!