Sunday, January 19, 2025
Sunday, January 19, 2025

ಸೆ. 23: ಒಂದು ರಾಷ್ಟ್ರ, ಒಂದು ಚುನಾವಣೆ ಸಮಿತಿಯ ಮೊದಲ ಸಭೆ

ಸೆ. 23: ಒಂದು ರಾಷ್ಟ್ರ, ಒಂದು ಚುನಾವಣೆ ಸಮಿತಿಯ ಮೊದಲ ಸಭೆ

Date:

ಭುವನೇಶ್ವರ, ಸೆ. 16: ‘ಒಂದು ರಾಷ್ಟ್ರ, ಒಂದು ಚುನಾವಣೆ’ ಸಮಿತಿಯ ಮೊದಲ ಸಭೆ ಸೆಪ್ಟೆಂಬರ್ 23 ರಂದು ನಡೆಯಲಿದೆ ಎಂದು ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಶನಿವಾರ ಒಡಿಶಾದ ಭುವನೇಶ್ವರದಲ್ಲಿ ಹೇಳಿದರು. ಲೋಕಸಭೆ, ರಾಜ್ಯ ವಿಧಾನಸಭೆಗಳು, ಪುರಸಭೆಗಳು ಮತ್ತು ಪಂಚಾಯತ್ಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸುವ ವಿಷಯದ ಬಗ್ಗೆ ಪರಿಶೀಲಿಸಲು ಮತ್ತು ಶಿಫಾರಸ್ಸುಗಳನ್ನು ಮಾಡಲು ಕೋವಿಂದ್ ಅವರ ಅಧ್ಯಕ್ಷತೆಯಲ್ಲಿ ಎಂಟು ಸದಸ್ಯರ ಉನ್ನತ ಮಟ್ಟದ ಸಮಿತಿಯನ್ನು ರಚಿಸಲಾಗಿದೆ.

ಸಮಿತಿಯ ಸದಸ್ಯರು ಯಾರು?: ಈ ಸಮಿತಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ, ರಾಜ್ಯಸಭೆಯ ಮಾಜಿ ವಿರೋಧ ಪಕ್ಷದ ನಾಯಕ ಗುಲಾಂ ನಬಿ ಆಜಾದ್ ಮತ್ತು ಹಣಕಾಸು ಆಯೋಗದ ಮಾಜಿ ಅಧ್ಯಕ್ಷ ಎನ್.ಕೆ.ಸಿಂಗ್ ಸದಸ್ಯರಾಗಿದ್ದಾರೆ. ಹಿರಿಯ ವಕೀಲ ಹರೀಶ್ ಸಾಳ್ವೆ, ಲೋಕಸಭೆಯ ಮಾಜಿ ಪ್ರಧಾನ ಕಾರ್ಯದರ್ಶಿ ಸುಭಾಷ್ ಸಿ ಕಶ್ಯಪ್ ಮತ್ತು ಮಾಜಿ ಮುಖ್ಯ ವಿಚಕ್ಷಣಾ ಆಯುಕ್ತ ಸಂಜಯ್ ಕೊಠಾರಿ ಅವರನ್ನು ಸಮಿತಿಯ ಸದಸ್ಯರನ್ನಾಗಿ ನೇಮಿಸಲಾಗಿದೆ. ರಾಜ್ಯ ಸಚಿವ ಅರ್ಜುನ್ ರಾಮ್ ಮೇಘವಾಲ್ ವಿಶೇಷ ಆಹ್ವಾನಿತರಾಗಿ ಸಮಿತಿಯ ಸಭೆಗಳಲ್ಲಿ ಭಾಗವಹಿಸಲಿದ್ದು, ಕಾನೂನು ವ್ಯವಹಾರಗಳ ಕಾರ್ಯದರ್ಶಿ ನಿತೇನ್ ಚಂದ್ರ ಸಮಿತಿಯ ಕಾರ್ಯದರ್ಶಿಯಾಗಲಿದ್ದಾರೆ.

ಸಮಿತಿಯ ಕಾರ್ಯಗಳೇನು?: ಏಕಕಾಲದಲ್ಲಿ ಚುನಾವಣೆಗಳನ್ನು ನಡೆಸುವ ಉದ್ದೇಶಕ್ಕಾಗಿ ಕಾನೂನುಗಳು ಮತ್ತು ನಿಯಮಗಳಿಗೆ ನಿರ್ದಿಷ್ಟ ತಿದ್ದುಪಡಿಗಳನ್ನು ಸಮಿತಿಯು ಪರಿಶೀಲಿಸುತ್ತದೆ ಮತ್ತು ಶಿಫಾರಸ್ಸು ಮಾಡುತ್ತದೆ. ಇದಲ್ಲದೆ, ಸಂವಿಧಾನದ ತಿದ್ದುಪಡಿಗಳಿಗೆ ರಾಜ್ಯಗಳ ಅನುಮೋದನೆ ಅಗತ್ಯವಿದೆಯೇ ಎಂದು ಅದು ಪರಿಶೀಲಿಸುತ್ತದೆ ಮತ್ತು ಶಿಫಾರಸು ಮಾಡುತ್ತದೆ. ಏಕಕಾಲದಲ್ಲಿ ಚುನಾವಣೆ ನಡೆದರೆ ಅತಂತ್ರ ಸದನ, ಅವಿಶ್ವಾಸ ಗೊತ್ತುವಳಿ ಅಂಗೀಕಾರ, ಪಕ್ಷಾಂತರ ಅಥವಾ ಇನ್ನಾವುದೇ ಘಟನೆಯಂತಹ ಸನ್ನಿವೇಶಗಳಿಗೆ ಸಂಭಾವ್ಯ ಪರಿಹಾರಗಳನ್ನು ಕೂಡ ಸಮಿತಿ ನೀಡಲಿದೆ. ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮತ್ತು ಮುಂದಿನ ವರ್ಷ ನಡೆಯಲಿರುವ ಲೋಕಸಭಾ ಚುನಾವಣೆಗೆ ಕೆಲವೇ ತಿಂಗಳುಗಳ ಮೊದಲು ಈ ಸಮಿತಿಯನ್ನು ರಚಿಸಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ‘ಒಂದು ರಾಷ್ಟ್ರ, ಒಂದು ಚುನಾವಣೆ’ ಕಲ್ಪನೆಯನ್ನು ಹಲವಾರು ಸಂದರ್ಭಗಳಲ್ಲಿ ಪ್ರಸ್ತಾಪಿಸಿದ್ದರು. 2020 ರ ನವೆಂಬರ್ನಲ್ಲಿ ಪ್ರಿಸೈಡಿಂಗ್ ಅಧಿಕಾರಿಗಳ ಸಮ್ಮೇಳನವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಒಂದು ರಾಷ್ಟ್ರ, ಒಂದು ಚುನಾವಣೆ ಭಾರತಕ್ಕೆ ಅಗತ್ಯವಾಗಿದೆ. ದೇಶದಲ್ಲಿ ಪ್ರತಿ ತಿಂಗಳು ಚುನಾವಣೆ ನಡೆಯುತ್ತಿದ್ದು, ಅಭಿವೃದ್ಧಿಗೆ ಅಡ್ಡಿಯಾಗಿದೆ. ಚುನಾವಣೆ ನಡೆಸಲು ಇಷ್ಟೊಂದು ಸಾರ್ವಜನಿಕ ಹಣವನ್ನು ಏಕೆ ಪೋಲು ಮಾಡಬೇಕು ಎಂದಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ ಸರ್ಕಲ್ ನಲ್ಲಿ ಬ್ಯಾರಿಕೇಡ್ ಅಳವಡಿಸಿರುವುದು ಅವೈಜ್ಞಾನಿಕ ಕ್ರಮ: ಮಾಜಿ ಶಾಸಕ ರಘುಪತಿ ಭಟ್

ಉಡುಪಿ, ಜ.19: ಅಂಬಾಗಿಲು - ಗುಂಡಿಬೈಲು ಮಾರ್ಗವಾಗಿ ಉಡುಪಿ ನಗರ ಪ್ರವೇಶಿಸುವ...

ಜ.27: ತೆಂಕನಿಡಿಯೂರು ಕಾಲೇಜಿನಲ್ಲಿ ಡಾ. ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರ

ಉಡುಪಿ, ಜ.18: ಕರ್ನಾಟಕ ಸರಕಾರದ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ...

ಮಣಿಪಾಲ ಕೆ.ಎಂ.ಸಿ: ಗೋಲ್- ಡೈರೆಕ್ಟೆಡ್ ಬ್ಲೀಡಿಂಗ್ ಮ್ಯಾನೇಜ್ಮೆಂಟ್ ವಿಚಾರ ಸಂಕಿರಣ

ಮಣಿಪಾಲ, ಜ.19: ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಇಮ್ಯುನೊಹೆಮಟಾಲಜಿ...

ಕಲ್ಸಂಕ ಜಂಕ್ಷನ್ ಸುಗಮ ಸಂಚಾರ ವ್ಯವಸ್ಥೆ ಬಗ್ಗೆ ಜಿಲ್ಲಾಧಿಕಾರಿ ಜೊತೆ ಶಾಸಕ ಯಶ್ಪಾಲ್ ಸುವರ್ಣ ಸಮಾಲೋಚನೆ

ಉಡುಪಿ, ಜ.19: ಕಲ್ಸಂಕ ಜಂಕ್ಷನ್ ನಲ್ಲಿ ಬ್ಯಾರಿಕೇಡ್ ಅಳವಡಿಸಿ ಆಂಬಾಗಿಲು ಭಾಗದ...
error: Content is protected !!