Saturday, October 3, 2026
Saturday, October 3, 2026

ಲಸಿಕೆ ಪಡೆಯುವ ಬಗ್ಗೆ ಹಿಂಜರಿಕೆ ಬೇಡ: ಪ್ರಧಾನಿ

ಲಸಿಕೆ ಪಡೆಯುವ ಬಗ್ಗೆ ಹಿಂಜರಿಕೆ ಬೇಡ: ಪ್ರಧಾನಿ

Date:

ಒಂದೇ ದಿನದಲ್ಲಿ 86 ಲಕ್ಷಕ್ಕೂ ಹೆಚ್ಚು ಜನರಿಗೆ ಲಸಿಕೆ ನೀಡುವ ಮೂಲಕ ಭಾರತ ಅಭೂತಪೂರ್ವ ಸಾಧನೆ ಮಾಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಭಾನುವಾರ ತಮ್ಮ ಮನ್ ಕಿ ಬಾತ್ ಕಾರ್ಯಕ್ರಮದ ಮೂಲಕ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಜೂನ್ 21 ರಂದು ಜನರ ಸಹಕಾರದಿಂದ ದೇಶ ಈ ಸಾಧನೆ ಮಾಡಿದೆ.

ಲಸಿಕೆಯಿಂದ ಸಿಗುವ ಸುರಕ್ಷತೆಯನ್ನು ಪ್ರತಿಯೊಬ್ಬ ವ್ಯಕ್ತಿಯೂ ಪಡೆಯಬೇಕು ಎಂದು ಪ್ರಧಾನಿ ಮೋದಿ ಒತ್ತಿ ಹೇಳಿದರು. ಲಸಿಕೆ ಸ್ವೀಕರಿಸಲು ಇರುವ ಹಿಂಜರಿಕೆಯನ್ನು ಕೊನೆಗೊಳಿಸಲು ಜನರನ್ನು ಪ್ರೋತ್ಸಾಹಿಸುವ ಕೆಲಸಗಳು ಆಗಬೇಕು. ಲಸಿಕೆ ಹಿಂಜರಿಕೆಯನ್ನು ಕೊನೆಗೊಳಿಸುವ ಸಲುವಾಗಿ ದೇಶಾದ್ಯಂತ ಸಂಸ್ಥೆಗಳು ಮುಂದೆ ಬಂದಿದ್ದು ಜನರ ಭೀತಿ ನಿವಾರಿಸುವ ಶ್ಲಾಘನೀಯ ಕಾರ್ಯವನ್ನು ಮಾಡುತ್ತಿವೆ ಎಂದು ಹೇಳಿದರು.

ಮಧ್ಯಪ್ರದೇಶದ ಬೆತುಲ್ ಜಿಲ್ಲೆಯ ದುಲಾರಿಯಾ ಗ್ರಾಮದ ಕೆಲವು ಜನರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಮಾತನಾಡಿ ಲಸಿಕೆ ಬಗ್ಗೆ ಅವರಲ್ಲಿದ್ದ ಅನುಮಾನಗಳನ್ನು ನಿವಾರಿಸಿದರು. ಕೊರೊನಾ ಅವಧಿಯಲ್ಲಿ ವೈದ್ಯರ ಹಾಗೂ ಇತರೆ ಕೊರೊನಾ ಸೇನಾನಿಗಳ ಸೇವೆಗಳನ್ನು ಪ್ರಧಾನಿ ಮೋದಿ ಸ್ಮರಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವಿಶ್ವಭಾರತಿ ಸೌಹಾರ್ದ ಕ್ರೆಡಿಟ್ ಸಹಕಾರಿ ಸಂಘ ನಿಯಮಿತ- ದಶಮಾನೋತ್ಸವ ಕಾರ್ಯಕ್ರಮ ಹಾಗೂ ವಾರ್ಷಿಕ ಸಾಮಾನ್ಯ ಸಭೆ

ಉಡುಪಿ, ಅ.2: ವಿಶ್ವಭಾರತಿ ಸೌಹಾರ್ದ ಕ್ರೆಡಿಟ್ ಸಹಕಾರಿ ಸಂಘ ನಿಯಮಿತ, ಉಡುಪಿ...

ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ ಪ್ರದಾನ

ಬೆಂಗಳೂರು, ಅ.2: ಮಹಾತ್ಮ ಗಾಂಧಿ ಜಯಂತಿಯ ಅಂಗವಾಗಿ ಬೆಂಗಳೂರಿನ ಗಾಂಧಿ ಭವನದಲ್ಲಿ...

ಏಷ್ಯನ್ ಗೇಮ್ಸ್: ಭಾರತದ ಒಟ್ಟು ಪದಕಗಳ ಸಂಖ್ಯೆ 76ಕ್ಕೆ ಏರಿಕೆ; ಪದಕ ಪಟ್ಟಿಯಲ್ಲಿ ಐದನೇ ಸ್ಥಾನ

ಯು.ಬಿ.ಎನ್.ಡಿ., ಅ.2: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ ಏಷ್ಯನ್ ಕ್ರೀಡಾಕೂಟದಲ್ಲಿ ಭಾರತದ ಪದಕ...
error: Content is protected !!