ನವದೆಹಲಿ, ಮಾ.22: ಭೂತಾನ್ ದೊರೆ ಜಿಗ್ಮೆ ಖೇಸರ್ ನಾಮ್ಗ್ಯೆಲ್ ವಾಂಗ್‌ಚುಕ್ ಅವರು ಭೂತಾನ್‌ನ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಆರ್ಡರ್ ಆಫ್ ದಿ ಡ್ರುಕ್ ಗ್ಯಾಲ್ಪೋವನ್ನು ಪ್ರಧಾನಿ ನರೇಂದ್ರ ಮೋದಿಯವರಿಗೆ ಶುಕ್ರವಾರ ಥಿಂಪುವಿನಲ್ಲಿ ಪ್ರದಾನ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಇದು ನನ್ನ ಜೀವನದಲ್ಲಿ ಬಹಳ ದೊಡ್ಡ ದಿನ. ಪ್ರತಿಯೊಂದು ಪ್ರಶಸ್ತಿಯೂ ವಿಶೇಷ, ಆದರೆ ಬೇರೆ ದೇಶದಿಂದ ಪ್ರಶಸ್ತಿ ಪಡೆದಾಗ ಎರಡೂ ದೇಶಗಳು ಸರಿಯಾದ ದಾರಿಯಲ್ಲಿ ಸಾಗುತ್ತಿವೆ ಎಂಬುದನ್ನು ತೋರಿಸುತ್ತದೆ ಎಂದರು. ಈ ಗೌರವ 140 ಕೋಟಿ ಭಾರತೀಯರಿಗೆ ಅರ್ಪಣೆ ಎಂದು ಹೇಳಿದರು.
ಪ್ರಧಾನಿ ನರೇಂದ್ರ ಮೋದಿಗೆ ಭೂತಾನ್‌ನ ಅತ್ಯುನ್ನತ ನಾಗರಿಕ ಪ್ರಶಸ್ತಿ ‘ಆರ್ಡರ್ ಆಫ್ ದ ಡ್ರುಕ್ ಗ್ಯಾಲ್ಪೋ’

ಪ್ರಧಾನಿ ನರೇಂದ್ರ ಮೋದಿಗೆ ಭೂತಾನ್‌ನ ಅತ್ಯುನ್ನತ ನಾಗರಿಕ ಪ್ರಶಸ್ತಿ ‘ಆರ್ಡರ್ ಆಫ್ ದ ಡ್ರುಕ್ ಗ್ಯಾಲ್ಪೋ’
Date: