Monday, January 20, 2025
Monday, January 20, 2025

ಶ್ರೀನಗರದಲ್ಲಿ 10ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ; ದೈಹಿಕ, ಮಾನಸಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಯಲ್ಲಿ ಯೋಗದ ಪಾತ್ರ ಮಹತ್ವದ್ದು: ಪ್ರಧಾನಿ ನರೇಂದ್ರ ಮೋದಿ

ಶ್ರೀನಗರದಲ್ಲಿ 10ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ; ದೈಹಿಕ, ಮಾನಸಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಯಲ್ಲಿ ಯೋಗದ ಪಾತ್ರ ಮಹತ್ವದ್ದು: ಪ್ರಧಾನಿ ನರೇಂದ್ರ ಮೋದಿ

Date:

ಶ್ರೀನಗರ, ಜೂ.21: ಇಂದು ಜಗತ್ತಿನಾದ್ಯಂತ 10ನೇ ಅಂತಾರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಗುತ್ತಿದೆ. ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿರುವ ಶೇರ್-ಇ-ಕಾಶ್ಮೀರ್ ಇಂಟರ್‌ನ್ಯಾಶನಲ್ ಕಾನ್ಫರೆನ್ಸ್ ಸೆಂಟರ್ (ಎಸ್‌ಕೆಐಸಿಸಿ) ನಲ್ಲಿ ಮುಖ್ಯ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶ್ರೀನಗರದಲ್ಲಿ ಯೋಗ ದಿನಾಚರಣೆಗೆ ಚಾಲನೆ ನೀಡಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ದೈಹಿಕ, ಮಾನಸಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಯನ್ನು ಪೋಷಿಸುವಲ್ಲಿ ಯೋಗದ ಪಾತ್ರ ಮಹತ್ವದ್ದು. ವಿಶ್ವಾದ್ಯಂತ ಯೋಗಾಭ್ಯಾಸ ಮಾಡುವವರ ಸಂಖ್ಯೆ ಹೆಚ್ಚುತ್ತಿದೆ ಅದರ ಉಪಯುಕ್ತತೆಯನ್ನು ಜನರು ಗುರುತಿಸುತ್ತಿದ್ದಾರೆ. ಕಳೆದ 10 ವರ್ಷಗಳಲ್ಲಿ ಯೋಗದ ವಿಸ್ತರಣೆಗೆ ಸಂಬಂಧಿಸಿದಂತೆ, ಪ್ರಧಾನ ಮಂತ್ರಿಗಳು ಹೊಸ ಯೋಗ ಆರ್ಥಿಕತೆಯ ಬಗ್ಗೆ ಮಾತನಾಡಿದರು ಮತ್ತು ಯೋಗ ಪ್ರವಾಸೋದ್ಯಮಕ್ಕೆ ಹೆಚ್ಚುತ್ತಿರುವ ಆಕರ್ಷಣೆ ಮತ್ತು ಯೋಗವನ್ನು ಕಲಿಯಲು ಭಾರತಕ್ಕೆ ಭೇಟಿ ನೀಡುವ ಜನರ ಬಯಕೆಯನ್ನು ಪ್ರಸ್ತಾಪಿಸಿದರು. ಜಮ್ಮು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ, ಕೇಂದ್ರ ಸಚಿವ ಪ್ರತಾಪ್ರರಾವ್ ಗಣಪತರಾವ್ ಜಾಧವ್ ಮತ್ತು ಇತರ ಅನೇಕ ಗಣ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ ಸರ್ಕಲ್ ನಲ್ಲಿ ಬ್ಯಾರಿಕೇಡ್ ಅಳವಡಿಸಿರುವುದು ಅವೈಜ್ಞಾನಿಕ ಕ್ರಮ: ಮಾಜಿ ಶಾಸಕ ರಘುಪತಿ ಭಟ್

ಉಡುಪಿ, ಜ.19: ಅಂಬಾಗಿಲು - ಗುಂಡಿಬೈಲು ಮಾರ್ಗವಾಗಿ ಉಡುಪಿ ನಗರ ಪ್ರವೇಶಿಸುವ...

ಜ.27: ತೆಂಕನಿಡಿಯೂರು ಕಾಲೇಜಿನಲ್ಲಿ ಡಾ. ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರ

ಉಡುಪಿ, ಜ.18: ಕರ್ನಾಟಕ ಸರಕಾರದ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ...

ಮಣಿಪಾಲ ಕೆ.ಎಂ.ಸಿ: ಗೋಲ್- ಡೈರೆಕ್ಟೆಡ್ ಬ್ಲೀಡಿಂಗ್ ಮ್ಯಾನೇಜ್ಮೆಂಟ್ ವಿಚಾರ ಸಂಕಿರಣ

ಮಣಿಪಾಲ, ಜ.19: ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಇಮ್ಯುನೊಹೆಮಟಾಲಜಿ...

ಕಲ್ಸಂಕ ಜಂಕ್ಷನ್ ಸುಗಮ ಸಂಚಾರ ವ್ಯವಸ್ಥೆ ಬಗ್ಗೆ ಜಿಲ್ಲಾಧಿಕಾರಿ ಜೊತೆ ಶಾಸಕ ಯಶ್ಪಾಲ್ ಸುವರ್ಣ ಸಮಾಲೋಚನೆ

ಉಡುಪಿ, ಜ.19: ಕಲ್ಸಂಕ ಜಂಕ್ಷನ್ ನಲ್ಲಿ ಬ್ಯಾರಿಕೇಡ್ ಅಳವಡಿಸಿ ಆಂಬಾಗಿಲು ಭಾಗದ...
error: Content is protected !!