ನವದೆಹಲಿ, ಜು.4: ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ನವದೆಹಲಿಯ ತಮ್ಮ ನಿವಾಸದಲ್ಲಿ ಟಿ-20 ವಿಶ್ವಕಪ್ ವಿಜೇತ ಭಾರತ ತಂಡಕ್ಕೆ ಆತಿಥ್ಯ ನೀಡಿದರು. ನಾಯಕ ರೋಹಿತ್ ಶರ್ಮಾ, ಕೋಚ್ ರಾಹುಲ್ ದ್ರಾವಿಡ್, ವಿರಾಟ್ ಕೊಹ್ಲಿ, ಹಾರ್ದಿಕ್ ಪಾಂಡ್ಯ, ಸೂರ್ಯಕುಮಾರ್ ಯಾದವ್ ಮತ್ತು ಜಸ್ಪ್ರೀತ್ ಬುಮ್ರಾ ಸೇರಿದಂತೆ ಆಟಗಾರರು ಸಭೆಯಲ್ಲಿ ಉಪಸ್ಥಿತರಿದ್ದರು. ಗುರುವಾರ ಬೆಳಗ್ಗೆ ಭಾರತ ಕ್ರಿಕೆಟ್ ತಂಡ ನವದೆಹಲಿಗೆ ಆಗಮಿಸಿದ್ದು, ಅವರಿಗೆ ಭವ್ಯ ಸ್ವಾಗತ ನೀಡಲಾಯಿತು.


ಬೃಹತ್ ದಿಗ್ವಿಜಯ ಮೆರವಣಿಗೆ: ವಿಕ್ಟರಿ ಪರೇಡ್ ಮರೈನ್ ಡ್ರೈವ್ ನಿಂದ ವಾಂಖೇಡೆ ಕ್ರೀಡಾಂಗಣದವರೆಗೆ ನಡೆಯಿತು. ವಿಶ್ವಕಪ್ ವಿಜೇತ ಟೀಮ್ ಇಂಡಿಯಾ ತಂಡದ ಸದಸ್ಯರು ತೆರೆದ ಬಸ್ ನಲ್ಲಿ ವಿಶ್ವಕಪ್ ಟ್ರೋಫಿಯೊಂದಿಗೆ ಸಂಭ್ರಮಿಸುವುದನ್ನು ವೀಕ್ಷಿಸಲು ರಸ್ತೆಯ ಇಕ್ಕೆಲಗಳಲ್ಲಿ ಸಹಸ್ರಾರು ಅಭಿಮಾನಿಗಳು ತ್ರಿವರ್ಣ ಧ್ವಜಗಳನ್ನು ಹಿಡಿದು ಸೇರಿದರು.