Home ಸುದ್ಧಿಗಳು ರಾಷ್ಟ್ರೀಯ ಜೂ.30: ಪ್ರಧಾನಿ ನರೇಂದ್ರ ಮೋದಿ ‘ಮನ್ ಕಿ ಬಾತ್’

ಜೂ.30: ಪ್ರಧಾನಿ ನರೇಂದ್ರ ಮೋದಿ ‘ಮನ್ ಕಿ ಬಾತ್’

100
0

ನವದೆಹಲಿ, ಜೂ.28: ಜೂನ್ 30 ಭಾನುವಾರ ಬೆಳಗ್ಗೆ 11 ಗಂಟೆಗೆ ಆಕಾಶವಾಣಿಯಲ್ಲಿ ನಡೆಯುವ ‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶ ಮತ್ತು ವಿದೇಶದ ಜನರೊಂದಿಗೆ ತಮ್ಮ ಆಲೋಚನೆಗಳನ್ನು ಹಂಚಿಕೊಳ್ಳಲಿದ್ದಾರೆ. ಇದು ಮಾಸಿಕ ರೇಡಿಯೋ ಕಾರ್ಯಕ್ರಮದ 111 ನೇ ಸಂಚಿಕೆಯಾಗಿದೆ. ಪ್ರಧಾನಿ ಮೋದಿ ಅವರು ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಇದು ಮನ್ ಕಿ ಬಾತ್ ಮೊದಲ ಸಂಚಿಕೆಯಾಗಿದೆ. ಕಾರ್ಯಕ್ರಮವನ್ನು ಆಕಾಶವಾಣಿ ಮತ್ತು ದೂರದರ್ಶನ, ಎ.ಐ.ಆರ್ ನ್ಯೂಸ್ ವೆಬ್‌ಸೈಟ್ ಮತ್ತು ನ್ಯೂಸ್‌ಏರ್ ಮೊಬೈಲ್ ಅಪ್ಲಿಕೇಶನ್‌ನ ಗಳಲ್ಲಿ ಪ್ರಸಾರ ಮಾಡಲಾಗುತ್ತದೆ. ಇದು ಎಐಆರ್ ನ್ಯೂಸ್, ಡಿಡಿ ನ್ಯೂಸ್, ಪಿಎಂಒ ಮತ್ತು ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಯೂಟ್ಯೂಬ್ ಚಾನೆಲ್‌ಗಳಲ್ಲಿ ಲೈವ್ ಸ್ಟ್ರೀಮ್ ಆಗುತ್ತದೆ. ಹಿಂದಿ ಪ್ರಸಾರವಾದ ತಕ್ಷಣ ಆಕಾಶವಾಣಿ ಪ್ರಾದೇಶಿಕ ಭಾಷೆಗಳಲ್ಲಿ ಕಾರ್ಯಕ್ರಮವನ್ನು ಪ್ರಸಾರ ಮಾಡುತ್ತದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.