ನವದೆಹಲಿ/ಹುಬ್ಬಳ್ಳಿ: ಕೋವಿಡ್ ಪ್ರಕರಣಗಳಲ್ಲಿ ಅಲ್ಪಮಟ್ಟದ ಏರಿಕೆ ಕಂಡುಬಂದ ಹಿನ್ನಲೆಯಲ್ಲಿ ಏಪ್ರಿಲ್ 27 ರಂದು ಪ್ರಧಾನಿ ನರೇಂದ್ರ ಮೋದಿ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸಲಿದ್ದಾರೆ.
ಈ ಕುರಿತು ಇಂದು ಹುಬ್ಬಳ್ಳಿಯಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕಳೆದ 10 ದಿನಗಳಿಂದ ಕೇರಳ ಮತ್ತು ಮಹಾರಾಷ್ಟ್ರ ರಾಜ್ಯಗಳಲ್ಲಿ ಅಲ್ಪಮಟ್ಟದ ಕೋವಿಡ್ ಪ್ರಕರಣಗಳು ಕಂಡುಬಂದಿದ್ದು ಹೆಚ್ಚು ಜಾಗ್ರತೆ ವಹಿಸುವಂತೆ ರಾಜ್ಯಗಳಿಗೆ ಕೇಂದ್ರ ಸರಕಾರ ಸೂಚನೆ ನೀಡಿದೆ ಎಂದು ಹೇಳಿದರು.
ಪ್ರಧಾನಿ ಜೊತೆ ಚರ್ಚೆ ನಡೆಸಿ ರಾಜ್ಯದಲ್ಲಿ ಕೋವಿಡ್ ನಿರ್ವಹಣೆ ಕುರಿತು ಸ್ಪಷ್ಟ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದರು.
ರಾಜ್ಯದಲ್ಲಿಂದು 60 ಮಂದಿ ಕೊರೊನಾ ಸೋಂಕಿತರಾಗಿದ್ದಾರೆ. ರಾಜ್ಯದಲ್ಲಿ ಒಟ್ಟು 1676 ಸಕ್ರಿಯ ಪ್ರಕರಣಗಳಿವೆ.