Saturday, January 18, 2025
Saturday, January 18, 2025

ಕೋವಿಡ್-19: ಇಂದಿನ ಹೆಲ್ತ್ ಬುಲೆಟಿನ್

ಕೋವಿಡ್-19: ಇಂದಿನ ಹೆಲ್ತ್ ಬುಲೆಟಿನ್

Date:

24 ಗಂಟೆಗಳಲ್ಲಿ ದೇಶಾದ್ಯಂತ 58,419 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗುವ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 2,98,81,965 ಕ್ಕೆ ಏರಿದೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ತಿಳಿಸಿದೆ. 81 ದಿನಗಳ ನಂತರ ದೈನಂದಿನ ಪಾಸಿಟಿವ್ ಪ್ರಕರಣಗಳು 60 ಸಾವಿರಕ್ಕಿಂತಲೂ ಕಡಿಮೆ ಕಂಡುಬಂದಿದೆ.

ಇದೇ ವೇಳೆ 87,619 ಮಂದಿ ಕಳೆದ 24 ತಾಸಿನಲ್ಲಿ ಗುಣಮುಖರಾಗಿದ್ದಾರೆ. ಸಕ್ರಿಯ ಪ್ರಕರಣಗಳಲ್ಲಿ ಕುಸಿತ ಮುಂದುವರಿದಿದ್ದು, ದೇಶದಲ್ಲಿ ಒಟ್ಟು 7,29,243 ಸಕ್ರಿಯ ಪ್ರಕರಣಗಳಿವೆ. ಇಲ್ಲಿಯವರೆಗೆ 2,87,66,009 ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 1576 ಮಂದಿ ಸಾವನ್ನಪ್ಪಿದ್ದಾರೆ, ಇಲ್ಲಿಯವರೆಗೆ ಒಟ್ಟು 3,86,713 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಇಲ್ಲಿಯವರೆಗೆ ಒಟ್ಟು 27,66,93,572 ಡೋಸ್ ಲಸಿಕೆ ನೀಡಲಾಗಿದೆ.

ದೇಶದ ಚೇತರಿಕೆ ಪ್ರಮಾಣವು ಶೇ. 96.27 ಕ್ಕೆ ಏರಿದೆ. ವಾರದ ಪಾಸಿಟಿವಿಟಿ ಪ್ರಮಾಣವು ಶೇ 3.43 ರಷ್ಟು ಇದ್ದರೆ, ದೈನಂದಿನ ಪಾಸಿಟಿವಿಟಿ ಪ್ರಮಾಣವು 3.22 ರಷ್ಟು ಇದೆ.

ಜೂನ್ 19 ರಂದು 18,11,446 ಮಾದರಿಗಳನ್ನು ಸಂಗ್ರಹಿಸಿ ಕೋವಿಡ್ ಪರೀಕ್ಷೆಗೆ ಕಳುಹಿಸಲಾಗಿದೆ. ಇಲ್ಲಿಯವರೆಗೆ 39,10,19,083 ಮಾದರಿಗಳನ್ನು ಪರೀಕ್ಷಿಸಲಾಗಿದೆ ಎಂದು ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ ಮಾಹಿತಿ ನೀಡಿದೆ. 

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ದಕ್ಷಿಣ ಕನ್ನಡ ಜಿಲ್ಲೆಗೆ ಸರ್ಕಾರಿ ವೈದ್ಯಕೀಯ ಕಾಲೇಜಿನ ಅಗತ್ಯ ಇದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಮಂಗಳೂರು, ಜ.17: ಜಿಲ್ಲೆಗೊಂದು ಸರ್ಕಾರಿ ವೈದ್ಯಕೀಯ ಕಾಲೇಜು ಇರಬೇಕು ಎನ್ನುವುದು ನನ್ನ...

ಕೋಟೆಕಾರ್ ಉಳ್ಳಾಲದ ಸಹಕಾರಿ ಬ್ಯಾಂಕ್ ದರೋಡೆ- ಮಂಗಳೂರಿನಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಮುಖ್ಯಮಂತ್ರಿ ತುರ್ತು ಸಭೆ

ಮಂಗಳೂರು, ಜ.17: ಕೋಟೆಕಾರ್ ಉಳ್ಳಾಲದ ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣದ ಹಿನ್ನೆಲೆಯಲ್ಲಿ...

ಸಾಲಿಗ್ರಾಮ: ಯುವ ವೇದಿಕೆ 8ನೇ ವಾರ್ಷಿಕೋತ್ಸವ

ಕೋಟ, ಜ.17: ಯುವ ವೇದಿಕೆಯ ಸಮಾಜಮುಖಿ ಕಾರ್ಯಗಳು ಅತ್ಯಂತ ಪ್ರಶಂಸನೀಯ ಎಂದು...

ದೈಹಿಕ ವಿಕಲಚೇತನರಿಗೆ ಬ್ಯಾಟರಿ ಚಾಲಿತ ವೀಲ್ ಚೇರ್ ಸೌಲಭ್ಯ: ಅರ್ಜಿ ಆಹ್ವಾನ

ಉಡುಪಿ, ಜ.17: ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ...
error: Content is protected !!