ಚಂಡೀಗಢ, ಏ. 25: ಶಿರೋಮಣಿ ಅಕಾಲಿ ದಳದ ವರಿಷ್ಠ ನಾಯಕ, ಪಂಜಾಬ್ ಮಾಜಿ ಮುಖ್ಯಮಂತ್ರಿ ಪ್ರಕಾಶ್ ಸಿಂಗ್ ಬಾದಲ್ ಮಂಗಳವಾದ ವಿಧಿವಶರಾದರು. ಅವರಿಗೆ 95 ವರ್ಷ ವಯಸ್ಸಾಗಿತ್ತು. ಮೊಹಾಲಿಯ ಫೋರ್ಟಿಸ್ ಆಸ್ಪತ್ರೆಯಲ್ಲಿ ಅವರು ಐಸಿಯುನಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದರು. ಉಸಿರಾಟದ ತೊಂದರೆಯಿಂದಾಗಿ ಅವರನ್ನು ಏಪ್ರಿಲ್ 21 ರಂದು ಆಸ್ಪತ್ರೆಗೆ ದಾಖಲಿಸಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.
1970-71, 1977-80, 1997-2002, 2007-2017 ರಲ್ಲಿ ಅವರು ಪಂಜಾಬ್ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದರು. ಪಂಜಾಬ್ ನ ಕಿರಿಯ ಮುಖ್ಯಮಂತ್ರಿ ಎಂಬ ಇತಿಹಾಸವನ್ನು ಬಾದಲ್ ನಿರ್ಮಿಸಿದ್ದರು.
ಪ್ರಧಾನಿ ಸಂತಾಪ: ಪ್ರಕಾಶ್ ಸಿಂಗ್ ಬಾದಲ್ ಅವರ ನಿಧನವು ನನಗೆ ವೈಯಕ್ತಿಕ ನಷ್ಟವಾಗಿದೆ. ನಾನು ಹಲವು ದಶಕಗಳಿಂದ ಅವರೊಂದಿಗೆ ನಿಕಟವಾಗಿ ಸಂವಹನ ನಡೆಸಿದ್ದೇನೆ ಮತ್ತು ಅವರಿಂದ ಬಹಳಷ್ಟು ಕಲಿತಿದ್ದೇನೆ. ಪಂಜಾಬ್ ಪ್ರಗತಿಗಾಗಿ ಪ್ರಕಾಶ್ ಸಿಂಗ್ ಬಾದಲ್ ದಣಿವರಿಯದೆ ಕೆಲಸ ಮಾಡಿದರು ಮತ್ತು ನಿರ್ಣಾಯಕ ಸಮಯದಲ್ಲಿ ರಾಜ್ಯವನ್ನು ಮುನ್ನಡೆಸಿದರು ಎಂದು ಪ್ರಧಾನಿ ನರೇಂದ್ರ ಮೋದಿ ತೀವ್ರ ಸಂತಾಪ ಸೂಚಿಸಿದ್ದಾರೆ.