Monday, February 24, 2025
Monday, February 24, 2025

ಭಾರತದ 15ನೇ ರಾಷ್ಟ್ರಪತಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ದ್ರೌಪದಿ ಮುರ್ಮು

ಭಾರತದ 15ನೇ ರಾಷ್ಟ್ರಪತಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ದ್ರೌಪದಿ ಮುರ್ಮು

Date:

ನವದೆಹಲಿ: ಭಾರತದ 15 ನೇ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಇಂದು ಪ್ರಮಾಣ ವಚನ ಸ್ವೀಕರಿಸಿದರು. ಸಂಸತ್ತಿನ ಸೆಂಟ್ರಲ್ ಹಾಲ್‌ನಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ಅವರು ಪ್ರಮಾಣ ವಚನ ಬೋಧಿಸಿದರು.

ಬಳಿಕ ಮಾತನಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು, ದೂರದ ಪ್ರದೇಶದ ಬಡ ಮಹಿಳೆಯೊಬ್ಬರು ರಾಷ್ಟ್ರಪತಿಯಾಗುತ್ತಿರುವುದು ಭಾರತದ ಪ್ರಜಾಪ್ರಭುತ್ವದ ಸೊಬಗು. ತಳಮಟ್ಟದ ಜನರ ಬೆಳವಣಿಗೆಗಾಗಿ, ಸಮಾಜದ ಅಂಚಿನಲ್ಲಿರುವವರ ಉನ್ನತಿಗಾಗಿ, ಮಹಿಳೆಯರ ಮತ್ತು ಯುವಜನರ ಸಬಲೀಕರಣಕ್ಕಾಗಿ ಕೆಲಸ ಮಾಡುವ ತನ್ನ ಸಂಕಲ್ಪವನ್ನು ರಾಷ್ಟ್ರಪತಿ ಮುರ್ಮು ಪುನರುಚ್ಚರಿಸಿದರು.

ಕಳೆದ ಕೆಲವು ವರ್ಷಗಳಲ್ಲಿ, ಮಹಿಳಾ ಸಬಲೀಕರಣಕ್ಕಾಗಿ ತೆಗೆದುಕೊಂಡ ನಿರ್ಧಾರಗಳು ಮತ್ತು ರೂಪಿಸಿದ ನೀತಿಗಳಿಂದಾಗಿ ದೇಶದಲ್ಲಿ ಹೊಸ ಶಕ್ತಿ ತುಂಬಿದೆ ಎಂದು ಹೇಳಿದ ಅವರು, ನವ ಭಾರತದ ಚೈತನ್ಯವನ್ನು ಮತ್ತು ಜಾಗತಿಕವಾಗಿ ದೇಶ ನಾಯಕತ್ವದ ಸ್ಥಾನವನ್ನು ವಹಿಸುತ್ತಿರುವುದು ಶ್ಲಾಘನೀಯ ಎಂದರು.

ವೈವಿಧ್ಯತೆಗಳಿಂದ ಕೂಡಿದ ದೇಶವು ಹಲವು ಭಾಷೆಗಳು, ಧರ್ಮಗಳು, ಪಂಥಗಳು, ಆಹಾರ ಪದ್ಧತಿ, ಜೀವನಶೈಲಿ ಮತ್ತು ಪದ್ಧತಿಗಳನ್ನು ಅಳವಡಿಸಿಕೊಳ್ಳುವ ಮೂಲಕ ‘ಏಕ್ ಭಾರತ್-ಶ್ರೇಷ್ಠ ಭಾರತ’ ಪರಿಕಲ್ಪನೆ ಸಾಕಾರಗೊಂಡಿದೆ. ಸ್ವಾತಂತ್ರ್ಯದ 75 ನೇ ವರ್ಷದಿಂದ ಪ್ರಾರಂಭವಾಗುವ ಅಮೃತಕಾಲ್ ಭಾರತಕ್ಕೆ ಹೊಸ ಸಂಕಲ್ಪಗಳ ಅವಧಿಯಾಗಿದೆ ಎಂದು ಅವರು ಹೇಳಿದರು.

ರಾಷ್ಟ್ರಪತಿ ಮುರ್ಮು ಅವರು ಪ್ರಮಾಣವಚನ ಸ್ವೀಕರಿಸುವ ಮುನ್ನ ರಾಷ್ಟ್ರ ರಾಜಧಾನಿಯ ರಾಜ್‌ಘಾಟ್‌ನಲ್ಲಿ ಗೌರವ ಸಲ್ಲಿಸಿದರು. ಆ ನಂತರ ನಿರ್ಗಮಿತ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಮತ್ತು ಅವರ ಪತ್ನಿ ಸವಿತಾ ಅವರು ರಾಷ್ಟ್ರಪತಿ ಭವನದಲ್ಲಿ ಮುರ್ಮು ಅವರಿಗೆ ಶುಭಾಶಯಗಳನ್ನು ಕೋರಿದರು. ನಂತರ ವಿಧ್ಯುಕ್ತ ಮೆರವಣಿಗೆಯಲ್ಲಿ ಸೆಂಟ್ರಲ್ ಹಾಲ್ ತಲುಪಿದರು.

ರಾಜ್ಯಸಭಾ ಅಧ್ಯಕ್ಷ ಎಂ. ವೆಂಕಯ್ಯ ನಾಯ್ಡು, ಪ್ರಧಾನಿ ನರೇಂದ್ರ ಮೋದಿ, ಲೋಕಸಭೆ ಸ್ಪೀಕರ್ ಓಂ ಬಿರ್ಲಾ, ಕೇಂದ್ರ ಸಚಿವರು, ರಾಜ್ಯಪಾಲರು, ಮುಖ್ಯಮಂತ್ರಿಗಳು, ರಾಜತಾಂತ್ರಿಕ ನಿಯೋಗಗಳ ಮುಖ್ಯಸ್ಥರು, ಸಂಸದರು, ಮತ್ತು ಭಾರತ ಸರ್ಕಾರದ ಪ್ರಧಾನ ಸಿವಿಲ್ ಮತ್ತು ಮಿಲಿಟರಿ ಅಧಿಕಾರಿಗಳು ಪ್ರಮಾಣ ವಚನ ಸಮಾರಂಭದಲ್ಲಿ ಉಪಸ್ಥಿತರಿದ್ದರು.

64 ವರ್ಷದ ದ್ರೌಪದಿ ಮುರ್ಮು ಅವರು ದೇಶದ ಅತ್ಯಂತ ಕಿರಿಯ ರಾಷ್ಟ್ರಪತಿಯಾಗಿದ್ದಾರೆ. ಅವರು ಸ್ವಾತಂತ್ರ್ಯದ ನಂತರ ಜನಿಸಿದ ಭಾರತದ ಮೊದಲ ರಾಷ್ಟ್ರಪತಿ ಕೂಡ ಹೌದು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರೆಡ್ ಕ್ರಾಸ್ ಶಿಬಿರ

ಉಡುಪಿ, ಫೆ.24: ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜಿನ ರೆಡ್ ಕ್ರಾಸ್...

ತುಳು ನಟ ನವೀನ್ ಡಿ ಪಡೀಲ್ ಅವರಿಗೆ ವಿಶ್ವಪ್ರಭಾ ಪ್ರಶಸ್ತಿ ಪ್ರದಾನ

ಉಡುಪಿ, ಫೆ.24: ಮಾನಸಿಕವಾಗಿ ದುಗುಡ-ಒತ್ತಡಕ್ಕೆ ಒಳಗಾದಾಗ ನಿವಾರಣೆಗಾಗಿ ನಾನಾ ರೀತಿಯ ಕ್ರಮ...

ಒಳಕಾಡು ಮಜಲು ಕೆರೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಉಡುಪಿ, ಫೆ.24: ಉಡುಪಿ ನಗರಸಭೆಯ ಒಳಕಾಡು ವಾರ್ಡಿನ ರೂ. 30 ಲಕ್ಷ...

ಪಂಚವರ್ಣ ಸ್ವಚ್ಛತಾ ಕಾರ್ಯ

ಕೋಟ, ಫೆ.24: ಕೋಟದ ಹರ್ತಟ್ಟು ಕಲ್ಲಟ್ಟು ಶ್ರೀ ಮಹಾಲಿಂಗೇಶ್ವರ ದೇಗುಲದ ವಾರ್ಷಿಕ...
error: Content is protected !!