ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ಪಂಜಾಬ್ ಭೇಟಿಯ ವೇಳೆ ಭದ್ರತಾ ವ್ಯವಸ್ಥೆಯಲ್ಲಿ ಆಗಿರುವ ಗಂಭೀರ ಲೋಪಗಳ ಕುರಿತು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಕಳವಳ ವ್ಯಕ್ತಪಡಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರನ್ನು ರಾಷ್ಟ್ರಪತಿ ಭವನದಲ್ಲಿ ಭೇಟಿಯಾಗಿ ಅವರು ಮಾಹಿತಿ ಪಡೆದರು.
ಸಮಿತಿ ರಚನೆ: ಘಟನೆಯ ಕುರಿತು ತನಿಖೆ ನಡೆಸಲು ಗೃಹ ಸಚಿವಾಲಯವು ಸಮಿತಿಯನ್ನು ರಚಿಸಿದೆ. ತ್ರಿಸದಸ್ಯ ಸಮಿತಿಯು ಕ್ಯಾಬಿನೆಟ್ ಸೆಕ್ರೆಟರಿಯಟ್ ಕಾರ್ಯದರ್ಶಿ (ಭದ್ರತೆ) ಸುಧೀರ್ ಕುಮಾರ್ ಸಕ್ಸೇನಾ ನೇತೃತ್ವದಲ್ಲಿರುತ್ತದೆ ಮತ್ತು ಐಬಿ ಜಂಟಿ ನಿರ್ದೇಶಕ ಬಲ್ಬೀರ್ ಸಿಂಗ್ ಮತ್ತು ಎಸ್‌ಪಿಜಿ, ಐಜಿ ಎಸ್‌ಪಿಜಿ ಎಸ್.ಸುರೇಶ್ ಅವರನ್ನು ಒಳಗೊಂಡಿರುತ್ತದೆ. ಆದಷ್ಟು ಶೀಘ್ರದಲ್ಲಿ ವರದಿ ಸಲ್ಲಿಸುವಂತೆ ಸಮಿತಿಗೆ ಸೂಚಿಸಲಾಗಿದೆ.