ಕರ್ನೂಲ್, ಅ.16: ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಮಧ್ಯಾಹ್ನ ಆಂಧ್ರಪ್ರದೇಶದ ಕರ್ನೂಲ್‌ನಲ್ಲಿ ಸುಮಾರು 13,430 ಕೋಟಿ ರೂಪಾಯಿ ಮೌಲ್ಯದ ಬಹು ಅಭಿವೃದ್ಧಿ ಯೋಜನೆಯ ಉದ್ಘಾಟನೆಯ ಪ್ರಯುಕ್ತ ಗುರುವಾರ ಬೆಳಿಗ್ಗೆ ಆಂಧ್ರಪ್ರದೇಶ ತಲುಪಿದರು. ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಪ್ರಧಾನಿ ನರೇಂದ್ರ ಮೋದಿಯವರನ್ನು ಸ್ವಾಗತಿಸಿದರು.

ನಂದ್ಯಾಲ್ ಜಿಲ್ಲೆಯ ಶ್ರೀಶೈಲಂನಲ್ಲಿರುವ ಶ್ರೀ ಭ್ರಮರಾಂಬ ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನದಲ್ಲಿ ಪ್ರಧಾನಿ ಮೋದಿ ಪ್ರಾರ್ಥನೆ ಸಲ್ಲಿಸಿದರು. ಶ್ರೀ ಭ್ರಮರಾಂಬ ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನವು 12 ಜ್ಯೋತಿರ್ಲಿಂಗಗಳಲ್ಲಿ ಒಂದಾಗಿದ್ದು ಮತ್ತು 52 ಶಕ್ತಿ ಪೀಠಗಳಲ್ಲಿ ಒಂದಾಗಿದೆ.

ನಂತರ, ಪ್ರಧಾನಿ ಮೋದಿ ಅವರು ಛತ್ರಪತಿ ಶಿವಾಜಿ ಮಹಾರಾಜರ ಪರಂಪರೆಯನ್ನು ಸ್ಮರಿಸಲು ಶ್ರೀಶೈಲಂನಲ್ಲಿರುವ ಶ್ರೀ ಶಿವಾಜಿ ಸ್ಪೂರ್ತಿ ಕೇಂದ್ರಕ್ಕೆ ಭೇಟಿ ನೀಡಿದರು.




By
ForthFocus™