ನವದೆಹಲಿ: 24 ಗಂಟೆಗಳಲ್ಲಿ ದೇಶಾದ್ಯಂತ 18,257 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ತಿಳಿಸಿದೆ.
14,553 ಮಂದಿ ಗುಣಮುಖರಾಗಿದ್ದಾರೆ, ದೇಶದಲ್ಲಿ ಒಟ್ಟು 1,28,690 ಸಕ್ರಿಯ ಪ್ರಕರಣಗಳಿವೆ. ಕಳೆದ 24 ಗಂಟೆಗಳಲ್ಲಿ 42 ಮಂದಿ ಸಾವನ್ನಪ್ಪಿದ್ದಾರೆ. ದೈನಂದಿನ ಪಾಸಿಟಿವಿಟಿ ಪ್ರಮಾಣ ಶೇ. 4.22 ಇದೆ.