ಪಟ್ನಾ, ಮೇ 29: ಹೀಟ್ ವೇವ್ (ಉಷ್ಣ ಅಲೆ) ದಿನೇ ದಿನೇ ಏರಿಕೆಯಾಗುತ್ತಿರುವ ಹಿನ್ನಲೆಯಲ್ಲಿ ಜೂನ್ 8 ರವರೆಗೆ ಶಾಲೆಗಳಿಗೆ ರಜೆ ನೀಡಲು ಬಿಹಾರ ಸರ್ಕಾರ ನಿರ್ಧಾರ ಕೈಗೊಂಡಿದೆ. ಈ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ರಾಜ್ಯ ಮುಖ್ಯ ಕಾರ್ಯದರ್ಶಿಗೆ ನಿರ್ದೇಶನ ನೀಡಿದ್ದು, ಪರಿಸ್ಥಿತಿಗೆ ಅನುಗುಣವಾಗಿ ಶಾಲೆಗಳಿಗೆ ರಜೆ ಘೋಷಿಸಲು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ. ರಾಜ್ಯದ ಎಲ್ಲಾ ಖಾಸಗಿ ಮತ್ತು ಸರ್ಕಾರಿ ಶಾಲೆಗಳು, ಟ್ಯೂಶನ್ ಕೇಂದ್ರಗಳು ಮೇ 30 ರಿಂದ ಜೂನ್ 8 ರವರೆಗೆ ತೆರೆಯದಂತೆ ಸೂಚನೆ ನೀಡಲಾಗಿದೆ.
ಬಿಹಾರ ರಾಜ್ಯದಲ್ಲಿ ತಾಪಮಾನ 40 ರಿಂದ 45 ಡಿಗ್ರಿ ಸೆಲ್ಶಿಯಸ್ ನಡುವೆ ದಾಖಲಾಗುತ್ತಿರುವ ಹಿನ್ನಲೆಯಲ್ಲಿ ಹಲವಾರು ವಿದ್ಯಾರ್ಥಿಗಳು ಉಷ್ಣ ಅಲೆಯ ಕಾರಣ ಅಸ್ವಸ್ಥರಾಗಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೆಕರ್ ಮುಖ್ಯ ಕಾರ್ಯದರ್ಶಿಗೆ ಕರೆ ಮಾಡಿ ಸೂಕ್ತ ಕ್ರಮ ಕೈಗೊಳ್ಳಲು ಕರೆ ನೀಡಿದ ಹಿನ್ನಲೆಯಲ್ಲಿ ರಜೆ ನೀಡುವ ನಿರ್ಧಾರ ಕೈಗೊಳ್ಳಲಾಗಿದೆ.