Sunday, September 29, 2024
Sunday, September 29, 2024

ಇಂದು ಸಂಜೆ ಸತತ ಮೂರನೇ ಅವಧಿಗೆ ಪ್ರಧಾನಿಯಾಗಿ ಬಿಜೆಪಿಯ ಹಿರಿಯ ನಾಯಕ ನಮೋ ಪ್ರಮಾಣ

ಇಂದು ಸಂಜೆ ಸತತ ಮೂರನೇ ಅವಧಿಗೆ ಪ್ರಧಾನಿಯಾಗಿ ಬಿಜೆಪಿಯ ಹಿರಿಯ ನಾಯಕ ನಮೋ ಪ್ರಮಾಣ

Date:

ನವದೆಹಲಿ, ಜೂ.9: ಇಂದು ಸಂಜೆ ರಾಷ್ಟ್ರಪತಿ ಭವನದಲ್ಲಿ ನಿಯೋಜಿತ ಪ್ರಧಾನಿ ನರೇಂದ್ರ ಮೋದಿ ಮತ್ತು ನೂತನ ಕೇಂದ್ರ ಸಚಿವ ಸಂಪುಟಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಬೋಧಿಸಲಿದ್ದಾರೆ. ದ್ರೌಪದಿ ಮುರ್ಮು ಅವರು ಹೊಸ ಸರ್ಕಾರ ರಚಿಸಲು ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಹ್ವಾನಿಸಿದ್ದರು. ಸಂಜೆ 7.15ಕ್ಕೆ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ. ಇಂದು ಬೆಳಿಗ್ಗೆ ಮೋದಿ ಅವರು ರಾಜಘಾಟ್ ಗೆ ತೆರಳಿ ಮಹಾತ್ಮ ಗಾಂಧಿಯವರ ಸ್ಮಾರಕಕ್ಕೆ, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಸದೈವ್ ಅಟಲ್ ಸ್ಮಾರಕಕ್ಕೆ ಗೌರವ ನಮನ ಸಲ್ಲಿಸಿದರು. ಅದೇ ರೀತಿ ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಪುಷ್ಪಾರ್ಚನೆ ನಡೆಸಿದರು.

ನೆರೆಯ ರಾಷ್ಟ್ರಗಳ ಬಾಂಧವ್ಯ ವೃದ್ಧಿಗೆ ಆದ್ಯತೆ: ಸತತ ಮೂರನೇ ಅವಧಿಗೆ ಪ್ರಧಾನಿಯಾಗಲಿರುವ ನರೇಂದ್ರ ಮೋದಿಯವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ನೆರೆಯ ರಾಷ್ಟ್ರಗಳ ಹಲವಾರು ನಾಯಕರನ್ನು ಆಹ್ವಾನಿಸಲಾಗಿದೆ. ಶ್ರೀಲಂಕಾ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ, ಮಾಲ್ಡೀವ್ಸ್ ಅಧ್ಯಕ್ಷ ಡಾ. ಮೊಹಮದ್ ಮುಯಿಝು, ಸೆಶೆಲ್ಸ್ ಉಪಾಧ್ಯಕ್ಷ ಅಹ್ಮದ್ ಅಫೀಫ್, ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ, ಮಾರಿಷಸ್ ಪ್ರಧಾನಿ ಪ್ರವಿಂದ್ ಕುಮಾರ್ ಜುಗ್ನಾಥ್, ನೇಪಾಳದ ಪ್ರಧಾನಿ ಪುಷ್ಪ ಕಮಲ್ ದಹಲ್ ‘ಪ್ರಚಂಡ’ ಮತ್ತು ಭೂತಾನ್ ಪ್ರಧಾನಿ ತ್ಶೆರಿಂಗ್ ತೊಬ್ಗೇ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಪ್ರಮಾಣ ವಚನ ಸಮಾರಂಭದಲ್ಲಿ ಭಾಗವಹಿಸುವುದರ ಜೊತೆಗೆ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಆಯೋಜಿಸಿರುವ ಔತಣ ಕೂಟದಲ್ಲಿ ನಾಯಕರು ಪಾಲ್ಗೊಳ್ಳಲಿದ್ದಾರೆ.

ಬಿಗಿ ಭದ್ರತೆ: ಕಾರ್ಯಕ್ರಮದ ವೇಳೆ ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ದೆಹಲಿ ಪೊಲೀಸರು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದ್ದಾರೆ. ಪ್ರಮಾಣ ವಚನ ಸಮಾರಂಭದ ಸಂದರ್ಭದಲ್ಲಿ ನವದೆಹಲಿಯಲ್ಲಿ ಪ್ಯಾರಾಗ್ಲೈಡರ್‌ಗಳು, ಪ್ಯಾರಾಮೋಟರ್‌ಗಳು, ಹ್ಯಾಂಗ್ ಗ್ಲೈಡರ್‌ಗಳು, ಮಾನವರಹಿತ ವೈಮಾನಿಕ ವಾಹನಗಳು (ಯುಎವಿಗಳು) ಮತ್ತು ಹಾಟ್ ಏರ್ ಬಲೂನ್‌ಗಳು ಮುಂತಾದವುಗಳಿಗೆ ದೆಹಲಿ ಪೊಲೀಸರು ನಿಷೇಧ ಹೇರಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಬಾಸ್ಕೆಟ್ ಬಾಲ್: ಕಾರ್ಕಳ ಜ್ಞಾನಸುಧಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ

ಗಣಿತನಗರ, ಸೆ.28: ಶಾಲಾ ಶಿಕ್ಷಣ ಇಲಾಖೆ(ಪ.ಪೂ.ಕಾಲೇಜು) ಹಾಗೂ ಗಣಿತನಗರದ ಕಾರ್ಕಳ ಜ್ಞಾನಸುಧಾ...

ಗುರುಪ್ರಸಾದ್ ಎ. ರವರಿಗೆ ಬೀಳ್ಕೊಡುಗೆ

ಮಣಿಪಾಲ, ಸೆ.28: ಸುಮಾರು 34 ವರ್ಷಗಳಿಂದ, ಮಣಿಪಾಲ ತಾಂತ್ರಿಕ ವಿದ್ಯಾಲಯದ ಇಲೆಕ್ಟ್ರಿಕಲ್...

ಪಂಡಿತ್ ದೀನ ದಯಾಳ್ ಉಪಾಧ್ಯಾಯ ಜನ್ಮದಿನಾಚರಣೆ

ಕಾಪು, ಸೆ.28: ಕಾಪು ಮಂಡಲ ಬಿಜೆಪಿ ಕಚೇರಿಯಲ್ಲಿ ಪಂಡಿತ್ ದೀನ ದಯಾಳ್...

ಸಾಹಿತ್ಯದ ಓದಿನಿಂದ ವಿಕಸನ: ರಾಜೇಂದ್ರ ಭಟ್ ಕೆ

ಕಾರ್ಕಳ, ಸೆ.28: ಸಾಹಿತ್ಯದ ಓದಿನಿಂದ ನಮ್ಮ ಭಾಷೆ ಶುದ್ಧವಾಗುವುದರಿಂದ ಸಂವಹನ ಸುಲಭವಾಗುತ್ತದೆ....
error: Content is protected !!