ಯು.ಬಿ.ಎನ್.ಡಿ., ಜು.15: ಭಾರತದ ಗಗನಯಾತ್ರಿ ಶುಭಾಂಶು ಶುಕ್ಲಾ, ತಮ್ಮ ಇತರ ಸಿಬ್ಬಂದಿಗಳೊಂದಿಗೆ ಮಂಗಳವಾರ ಭೂಮಿಗೆ ವಾಪಾಸಾಗಿದ್ದಾರೆ. ಗ್ರೂಪ್ ಕ್ಯಾಪ್ಟನ್ ಶುಕ್ಲಾ ಮತ್ತು ಇತರರನ್ನು ಹೊತ್ತ ಸ್ಪೇಸ್‌ಎಕ್ಸ್ ಸಿಬ್ಬಂದಿ ಕ್ಯಾಪ್ಸುಲ್ ಗ್ರೇಸ್, ಮಂಗಳವಾರ ಭಾರತೀಯ ಸಮಯ ಮಧ್ಯಾಹ್ನ 3 ಗಂಟೆಗೆ ಸ್ಯಾನ್ ಡಿಯಾಗೋ ಬಳಿಯ ಕ್ಯಾಲಿಫೋರ್ನಿಯಾ ಕರಾವಳಿಯಲ್ಲಿ ಲ್ಯಾಂಡ್ ಆದ ಸುಮಾರು 50 ನಿಮಿಷಗಳ ನಂತರ, ಅವರನ್ನು ಬಾಹ್ಯಾಕಾಶ ನೌಕೆಯಿಂದ ಹೊರಗೆ ತರಲಾಯಿತು. ಸೋಮವಾರ, ಬಾಹ್ಯಾಕಾಶ ನೌಕೆಯು ಬಾಹ್ಯಾಕಾಶ ನಿಲ್ದಾಣದ ಸುತ್ತಲಿನ 200 ಮೀಟರ್ ರೇಖೆಯಾದ ‘ಕೀಪ್ ಔಟ್ ಸ್ಪಿಯರ್’ ನಿಂದ ನಿರ್ಗಮಿಸಿದ ಶುಕ್ಲಾ ಮತ್ತು ಸಿಬ್ಬಂದಿಗಳು 18 ದಿನಗಳ ವಾಸ್ತವ್ಯದ ನಂತರ 22.5 ಗಂಟೆಗಳ ಪ್ರಯಾಣವನ್ನು ಪೂರ್ಣಗೊಳಿಸಿ ಮರಳಿದರು.
ಮೆಚ್ಚುಗೆ ವ್ಯಕ್ತಪಡಿಸಿದ ಪ್ರಧಾನಿ ಮೋದಿ: ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಭೇಟಿ ನೀಡಿದ ಭಾರತದ ಮೊದಲ ಗಗನಯಾತ್ರಿಯಾಗಿ, ಅವರು ತಮ್ಮ ಸಮರ್ಪಣೆ, ಧೈರ್ಯ ಮತ್ತು ಕ್ರಿಯಾಶೀಲ ಮನೋಭಾವದ ಮೂಲಕ ಶತಕೋಟಿ ಕನಸುಗಳನ್ನು ಪ್ರೇರೇಪಿಸಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಎಕ್ಸ್ ನಲ್ಲಿ ಸಂತಸ ವ್ಯಕ್ತಪಡಿಸಿದರು.
ಬಾಹ್ಯಾಕಾಶ ನೌಕೆ ಭೂಮಿಗೆ ಮರಳಿದ ನಂತರ ಗ್ರೂಪ್ ಕ್ಯಾಪ್ಟನ್ ಶುಕ್ಲಾ ಆಗಸ್ಟ್ 17 ರಂದು ದೆಹಲಿಗೆ ಹಿಂತಿರುಗಲಿದ್ದಾರೆ ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಹೇಳಿದರು. ಭಾರತೀಯ ವಾಯುಪಡೆಯ ಪೈಲಟ್ ಆಗಿರುವ ಗ್ರೂಪ್ ಕ್ಯಾಪ್ಟನ್ ಶುಕ್ಲಾ, 1984 ರಲ್ಲಿ ವಿಂಗ್ ಕಮಾಂಡರ್ ರಾಕೇಶ್ ಶರ್ಮಾ ನಂತರ ಬಾಹ್ಯಾಕಾಶಕ್ಕೆ ಭೇಟಿ ನೀಡಿದ ಎರಡನೇ ಭಾರತೀಯ.




By
ForthFocus™