ನವದೆಹಲಿ, ಸೆ. 20: ಕೇಂದ್ರ ಸರ್ಕಾರ ಜಾರಿಗೊಳಿಸಿದ ಮಹಿಳಾ ಮೀಸಲಾತಿ ಮಸೂದೆಗೆ ಸಂಪೂರ್ಣ ಬೆಂಬಲವಿದೆ ಎಂದು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಹೇಳಿದರು. ಈ ಮಸೂದೆಯನ್ನು ತಕ್ಷಣ ಜಾರಿಗೊಳಿಸುವುದರ ಜೊತೆಗೆ ಹಿಂದೂಳಿದ ವರ್ಗದ(ಒಬಿಸಿ) ಮಹಿಳೆಯರಿಗೂ ಸಮರ್ಪಕ ಮೀಸಲಾತಿ ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ. ಲೋಕಸಭೆಯ ಮಸೂದೆ ಮೇಲಿನ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಸೋನಿಯಾ ಗಾಂಧಿ, ನಾರಿ ಶಕ್ತಿ ವಂದನ್ ಅಧಿನಿಯಮ್ 2023ಗೆ ಕಾಂಗ್ರೆಸ್ ಪಕ್ಷವೂ ಒಮ್ಮತದಿಂದ ಒಪ್ಪಿಗೆ ಸೂಚಿಸಿದೆ. ಮೀಸಲಾತಿಯನ್ನು ಜಾರಿಗೊಳಿಸಲು ವಿಳಂಬ ನೀತಿ ಅನುಸರಿಸಬಾರದು, ಜಾತಿ ಆಧಾರಿತ ಗಣತಿಯನ್ನು ನಡೆಸುವ ಮೂಲಕ ಎಸ್‌ಸಿ, ಎಸ್‌ಟಿ, ಒಬಿಸಿ ಮಹಿಳೆಯರಿಗೂ ಸಮರ್ಪಕವಾದ ಮೀಸಲಾತಿ ಅವಕಾಶ ಕಲ್ಪಿಸಬೇಕು. ಸಾಗರದಷ್ಟು ತಾಳ್ಮೆಯನ್ನು ಭಾರತೀಯ ಮಹಿಳೆ ತನ್ನ ಹೃದಯದಲ್ಲಿ ಹೊಂದಿದ್ದಾಳೆ. ಸ್ವಂತ ಲಾಭಕ್ಕಾಗಿ ಏನನ್ನೂ ಮಾಡದೇ ಆಕೆ ಒಂದು ನದಿಯಂತೆ ಎಲ್ಲರ ಕಲ್ಯಾಣಕ್ಕಾಗಿ ಶ್ರಮಿಸಿದ್ದಾಳೆ. ಸ್ವಾತಂತ್ರ್ಯ ಮತ್ತು ನವಭಾರತ ನಿರ್ಮಾಣದ ಹೋರಾಟದಲ್ಲಿ ಮಹಿಳೆಯರ ಪಾತ್ರ ಶ್ಲಾಘನೀಯ ಎಂದು ಸೋನಿಯಾ ಗಾಂಧಿ ಹೇಳಿದರು.
ಮಹಿಳಾ ಮೀಸಲಾತಿ ಮಸೂದೆಗೆ ತಮ್ಮ ಸಂಪೂರ್ಣ ಬೆಂಬಲವಿದೆ: ಸೋನಿಯಾ ಗಾಂಧಿ
ಮಹಿಳಾ ಮೀಸಲಾತಿ ಮಸೂದೆಗೆ ತಮ್ಮ ಸಂಪೂರ್ಣ ಬೆಂಬಲವಿದೆ: ಸೋನಿಯಾ ಗಾಂಧಿ
Date: