Friday, October 2, 2026
Friday, October 2, 2026

ಬಿಜೆಪಿ ಕಛೇರಿ ಮೇಲೆ ಕಲ್ಲು ತೂರಾಟ

ಬಿಜೆಪಿ ಕಛೇರಿ ಮೇಲೆ ಕಲ್ಲು ತೂರಾಟ

Date:

ನಾಸಿಕ್: ಬಿಜೆಪಿ ಮತ್ತು ಕೇಂದ್ರ ಸಚಿವ ನಾರಾಯಣ ರಾಣೆ ವಿರುದ್ಧ ಘೋಷಣೆಗಳನ್ನು ಕೂಗುತ್ತಾ, ಶಿವಸೇನೆಯ ಕಾರ್ಯಕರ್ತರು ಬಿಜೆಪಿ ಕಛೇರಿಯ ಮೇಲೆ ಕಲ್ಲು ತೂರಾಟ ನಡೆಸಿದ ಘಟನೆ ಮಹಾರಾಷ್ಟ್ರದ ನಾಸಿಕ್ ನಲ್ಲಿ ಮಂಗಳವಾರ ನಡೆದಿದೆ.

ಕೇಂದ್ರ ಸಚಿವ ಹಾಗೂ ಬಿಜೆಪಿ ನಾಯಕ ನಾರಾಯಣ ರಾಣೆ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ವಿರುದ್ಧ ಹೇಳಿಕೆಯನ್ನು ನೀಡಿದ್ದರು. ಈ ಕಾರಣಕ್ಕಾಗಿ ಶಿವಸೇನೆಯ ಕಾರ್ಯಕರ್ತರು ಬಿಜೆಪಿ ಕಛೇರಿಯ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.

ಏತನ್ಮಧ್ಯೆ, ನಾರಾಯಣ ರಾಣೆಯವರ ಮುಂಬಯಿ ನಿವಾಸದ ಬಳಿ ಶಿವಸೇನೆ ಮತ್ತೆ ಬಿಜೆಪಿ ಕಾರ್ಯಕರ್ತರ ನಡುವೆ ತೀವ್ರ ಮಾತಿನ ಚಕಮಕಿ ನಡೆದು ಘರ್ಷಣೆಗೆ ತಿರುಗಿದಾಗ ಪೊಲೀಸರು ಎರಡೂ ಪಕ್ಷಗಳ ಕಾರ್ಯಕರ್ತರನ್ನು ಸ್ಥಳದಿಂದ ಚದುರಿಸಿದ್ದಾರೆ.

ಶಿವಸೇನೆಯ ನಾಸಿಕ್ ಘಟಕದ ಅಧ್ಯಕ್ಷ ನೀಡಿದ ದೂರಿನನ್ವಯ, ನಾಸಿಕ್ ಸೈಬರ್ ಪೊಲೀಸರು ಕೇಂದ್ರ ಸಚಿವ ನಾರಾಯಣ ರಾಣೆಯವರ ವಿರುದ್ಧ ಎಫ್.ಐ.ಆರ್ ದಾಖಲಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಏಷ್ಯನ್ ಗೇಮ್ಸ್: ಭಾರತದ ಪದಕ ಪಟ್ಟಿಗೆ 6 ಪದಕಗಳ ಸೇರ್ಪಡೆ

ಯು.ಬಿ.ಎನ್.ಡಿ., ಅ.1: ಜಪಾನ್‌ನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್‌ನಲ್ಲಿ ಭಾರತಕ್ಕೆ ಇಂದು ಮತ್ತೊಂದು...

ವಿವಿಧ ಹುದ್ದೆಗಳ ನೇಮಕಾತಿ: ಅರ್ಜಿ ಆಹ್ವಾನ

ಉಡುಪಿ, ಅ.1: ಸಿಬ್ಬಂದಿ ನೇಮಕಾತಿ ಆಯೋಗವು ಭಾರತ ಸರ್ಕಾರದ ವಿವಿಧ ಸಚಿವಾಲಯ,...
error: Content is protected !!