Monday, July 27, 2026
Monday, July 27, 2026

ಭಯೋತ್ಪಾದನೆ ನಿಗ್ರಹಿಸಲು ಬಲವಾದ ಜಾಗತಿಕ ಸಹಕಾರ ಅಗತ್ಯ: ವಿದೇಶಾಂಗ ಸಚಿವ ಎಸ್ ಜೈಶಂಕರ್

ಭಯೋತ್ಪಾದನೆ ನಿಗ್ರಹಿಸಲು ಬಲವಾದ ಜಾಗತಿಕ ಸಹಕಾರ ಅಗತ್ಯ: ವಿದೇಶಾಂಗ ಸಚಿವ ಎಸ್ ಜೈಶಂಕರ್

Date:

ನವದೆಹಲಿ, ಅ.16: ಭಯೋತ್ಪಾದನೆ, ಆರ್ಥಿಕ ಅಸ್ಥಿರತೆ ಮತ್ತು ಹವಾಮಾನ ಬದಲಾವಣೆಯನ್ನು ನಿಭಾಯಿಸಲು ಬಲವಾದ ಜಾಗತಿಕ ಸಹಕಾರಕ್ಕಾಗಿ ವಿದೇಶಾಂಗ ಸಚಿವ ಎಸ್ ಜೈಶಂಕರ್ ಕರೆ ನೀಡಿದ್ದಾರೆ.

ಭಯೋತ್ಪಾದನೆ, ಆರ್ಥಿಕ ಅಸ್ಥಿರತೆ ಮತ್ತು ಹವಾಮಾನ ಬದಲಾವಣೆಯಿಂದ ಉಂಟಾಗುವ ಸವಾಲುಗಳನ್ನು ಎದುರಿಸಲು ರಾಷ್ಟ್ರಗಳ ನಡುವೆ ಸಹಕಾರವನ್ನು ಹೆಚ್ಚಿಸುವ ಅಗತ್ಯವಿದೆ ಎಂದು ವಿದೇಶಾಂಗ ಸಚಿವ ಡಾ. ಎಸ್ ಜೈಶಂಕರ್ ಒತ್ತಿ ಹೇಳಿದ್ದಾರೆ.

ನವದೆಹಲಿಯಲ್ಲಿ ನಡೆದ ವಿಶ್ವಸಂಸ್ಥೆಯ ಸೇನಾ ಕೊಡುಗೆ ನೀಡುವ ರಾಷ್ಟ್ರಗಳ ಮುಖ್ಯಸ್ಥರ ಸಮಾವೇಶವನ್ನು ಉದ್ದೇಶಿಸಿ ಅವರು ಮಾತನಾಡಿದರು. ಬದಲಾಗುತ್ತಿರುವ ಭೌಗೋಳಿಕ ರಾಜಕೀಯ ಚಲನಶೀಲತೆ, ವಿಶ್ವ ವ್ಯವಹಾರಗಳ ಸಂಕೀರ್ಣತೆ ಮತ್ತು ಸಂಘರ್ಷಗಳ ಸ್ವರೂಪ ಎಲ್ಲವೂ ಶಾಂತಿಪಾಲನೆಯ ಬೇಡಿಕೆಗಳನ್ನು ರೂಪಿಸಿವೆ ಎಂದು ಸಚಿವರು ಹೇಳಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾರ್ಗಿಲ್ ಯುದ್ಧದಲ್ಲಿ ಭಾಗವಹಿಸಿದ್ದು ಹೆಮ್ಮೆಯ ಕ್ಷಣ: ಕಾರ್ಗಿಲ್ ಯೋಧ ಅನಂತಪದ್ಮನಾಭ ನಾಯಕ್

ಶಿರ್ವ, ಜು.26: 1999 ರ ಕಾರ್ಗಿಲ್ ಯುದ್ಧದಲ್ಲಿ ಭಾರತ ದೇಶದ ಪರವಾಗಿ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ದೇಶದ ಎಚ್ಚೆತ್ತ ಯುವಜನರ ಗೆಲುವಾಗಿದೆ: ಸಿದ್ದರಾಮಯ್ಯ

ಬೆಂಗಳೂರು, ಜು.26: ಧರ್ಮೇಂದ್ರ ಪ್ರಧಾನ್ ರಾಜೀನಾಮೆ ದೇಶದ ಎಚ್ಚೆತ್ತ ಯುವಜನರ ಗೆಲುವಾಗಿದೆ....
error: Content is protected !!