ಜೈಪುರ: ಹಾಡುಹಗಲೇ ಟೈಲರ್ ವೃತ್ತಿ ನಡೆಸುತ್ತಿರುವ ಕನ್ಹಯ್ಯಾ ಲಾಲ್ ನ ಅಂಗಡಿಗೆ ನುಗ್ಗಿ ಆತನ ಶಿರಚ್ಛೇದ ನಡೆಸಿದ ಘಟನೆ ಇಂದು ರಾಜಸ್ಥಾನದ ಉದಯಪುರದಲ್ಲಿ ಸಂಭವಿಸಿದೆ. ನೂಪುರ್ ಶರ್ಮಾ ಅವರನ್ನು ಬೆಂಬಲಿಸಿದ ಪೋಸ್ಟ್ ಒಂದನ್ನು ಜಾಲತಾಣದಲ್ಲಿ ಶೇರ್ ಮಾಡಿದ ಎಂದು ಆ ವ್ಯಕ್ತಿಯನ್ನು ಹತ್ಯೆ ಮಾಡಲಾಗಿದೆ.
ಹಂತಕರು
ಹಂತಕರು ಪ್ರಧಾನಿ ನರೇಂದ್ರ ಮೋದಿಯವರಿಗೂ ಜೀವ ಬೆದರಿಕೆ ಹಾಕಿ ವಿಡಿಯೋ ಪೋಸ್ಟ್ ಮಾಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ರಿಯಾಸ್ ಮಹಮ್ಮದ್ ಮತ್ತು ಗೌಸ್ ನನ್ನು ಬಂಧಿಸಲಾಗಿದೆ.
ಹಂತಕರು ಘಟನೆಯನ್ನು ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ್ದಾರೆ. ಘಟನೆಯನ್ನು ಖಂಡಿಸಿ ಸ್ಥಳೀಯ ವ್ಯಾಪಾರಿಗಳು ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ಪ್ರತಿಭಟನೆ ನಡೆಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳುವುದಾಗಿ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಹೇಳಿದ್ದಾರೆ.
ತುಷ್ಟೀಕರಣ ರಾಜಕಾರಣದ ಪರಿಣಾಮ: ರಾಜ್ಯವರ್ಧನ್ ರಾಥೋಡ್
ರಾಜಸ್ಥಾನದ ಕಾಂಗ್ರೆಸ್ ಸರ್ಕಾರದ ತುಷ್ಟೀಕರಣ ರಾಜಕಾರಣ ತಾಲಿಬಾನಿ ಸಂಸ್ಕೃತಿ ಬೇರೂರುವಂತೆ ಮಾಡಿದೆ. ರಾಜ್ಯ ಸರ್ಕಾರ ಅಸಮರ್ಥವಾಗಿದೆ. ಮಾನಸಿಕವಾಗಿ ಸಿಎಂ ದಿಲ್ಲಿಯಲ್ಲಿ ಮಾತ್ರ ಉಳಿದುಕೊಂಡಿದ್ದು, ರಾಜ್ಯದ ಜನರು ಪರಿಣಾಮ ಎದುರಿಸುತ್ತಿದ್ದಾರೆ ಎಂದು ಬಿಜೆಪಿ ನಾಯಕ ರಾಜ್ಯವರ್ಧನ್ ರಾಥೋಡ್ ಘಟನೆಯನ್ನು ಖಂಡಿಸಿ ಪ್ರತಿಕ್ರಿಯೆ ನೀಡಿದ್ದಾರೆ.