ಸಹರಾನ್‌ಪುರ (ಉತ್ತರ ಪ್ರದೇಶ), ಏ.6: ಈ ಚುನಾವಣೆ ಕೇವಲ ಸರ್ಕಾರ ರಚನೆಯ ಚುನಾವಣೆಯಲ್ಲ, ಅಭಿವೃದ್ಧಿ ಹೊಂದಿದ ಭಾರತವನ್ನಾಗಿ ಮಾಡಲು ಈ ಚುನಾವಣೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಉತ್ತರ ಪ್ರದೇಶದ ಸಹರಾನ್‌ಪುರದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಅವರು ಮಾತನಾಡಿದರು. ಕಳೆದ ಐದು ವರ್ಷಗಳಲ್ಲಿ, ಭಾರತವು ವಿಶ್ವದ ಐದನೇ ಅತಿದೊಡ್ಡ ಆರ್ಥಿಕತೆಯಾಗಿದೆ. ಬಿಜೆಪಿ ಸರ್ಕಾರ ಯಾವುದೇ ತಾರತಮ್ಯವಿಲ್ಲದೆ ಕೆಲಸ ಮಾಡುತ್ತಿದೆ, ನಮ್ಮ ನೀತಿಗಳು ಎಲ್ಲರಿಗೂ ತಲುಪಬೇಕೆಂದು ನಾವು ಬಯಸುತ್ತೇವೆ ಮತ್ತು ಇದಕ್ಕಾಗಿ ನಾವು 10 ವರ್ಷಗಳ ಕಾಲ ಜಾತ್ಯಾಅತೀತತೆ ಮತ್ತು ಸಾಮಾಜಿಕ ನ್ಯಾಯದ ಅಡಿಯಲ್ಲಿ ಶ್ರಮಿಸಿದ್ದೇವೆ. ಕಳೆದ 10 ವರ್ಷಗಳಲ್ಲಿ ಸರ್ಕಾರ ರೈತರ ಅಭಿವೃದ್ಧಿಗೆ ನಿರಂತರವಾಗಿ ಶ್ರಮಿಸಿದೆ. ‘ವೋಕಲ್ ಫಾರ್ ಲೋಕಲ್’ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆ ಜನರ ಮನ ಗೆದ್ದಿದೆ. ನೀವು ಇಲ್ಲಿಯವರೆಗೆ ನೋಡಿರುವುದು ಕೇವಲ ಟ್ರೇಲರ್, ಅಭಿವೃದ್ಧಿ ಹೊಂದಿದ ಭಾರತಕ್ಕಾಗಿ ಇನ್ನೂ ಬಹಳಷ್ಟು ಮಾಡಬೇಕಾಗಿದೆ ಎಂದು ಅವರು ಹೇಳಿದರು.
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ನಾಯಕತ್ವದಲ್ಲಿ ದೇಶವು ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಳ್ಳುತ್ತಿದೆ. ಇಂದು ಭಾರತವು ವಿಶ್ವ ದರ್ಜೆಯ ಮೂಲಸೌಕರ್ಯಕ್ಕೆ ಹೆಸರುವಾಸಿಯಾಗಿದೆ ಮತ್ತು ಭಾರತವು ಜಗತ್ತಿಗೆ ಅಭಿವೃದ್ಧಿಯ ಮಾದರಿಯನ್ನು ನೀಡುತ್ತಿದೆ ಎಂದರು. ಸಹರಾನ್‌ಪುರದ ಬಿಜೆಪಿ ಅಭ್ಯರ್ಥಿ ರಾಘವ್ ಲಖನ್‌ಪಾಲ್, ಕೈರಾನಾ ಅಭ್ಯರ್ಥಿ ಪ್ರದೀಪ್ ಚೌಧರಿ, ಮುಂತಾದವರು ಉಪಸ್ಥಿತರಿದ್ದರು.