ನವದೆಹಲಿ, ಫೆ.6: ದೆಹಲಿ ವಿಧಾನಸಭಾ ಚುನಾವಣೆಯ ಫಲಿತಾಂಶಕ್ಕೆ ದಿನಗಣನೆ ಆರಂಭಗೊಂಡಿದೆ. ಆಕ್ಸಿಸ್ ಮೈ ಇಂಡಿಯಾ ನಂತರ, ಟುಡೇಸ್ ಚಾಣಕ್ಯ ಬಿಜೆಪಿಗೆ ಭಾರಿ ಗೆಲುವಿನ ಮುನ್ಸೂಚನೆ ನೀಡಿದೆ ದೆಹಲಿ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಎರಡು ಪ್ರಮುಖ ಸಮೀಕ್ಷೆಗಳಾದ ಆಕ್ಸಿಸ್ ಮೈ ಇಂಡಿಯಾ ಮತ್ತು ಟುಡೇಸ್ ಚಾಣಕ್ಯ ಗುರುವಾರ ಭಾರತೀಯ ಜನತಾ ಪಕ್ಷಕ್ಕೆ ಗೆಲುವಿನ ಭವಿಷ್ಯ ನುಡಿದಿದ್ದು, ಅರವಿಂದ್ ಕೇಜ್ರಿವಾಲ್ ಅವರ ಆಮ್ ಆದ್ಮಿ ಪಕ್ಷ (ಎಎಪಿ) ಎರಡನೇ ಸ್ಥಾನಕ್ಕೆ ತೃಪ್ತಿಪಡಲಿದೆ ಎಂದು ಭವಿಷ್ಯ ನುಡಿದಿದೆ. ಆಮ್ ಆದ್ಮಿ ಪಕ್ಷ ಸಮೀಕ್ಷೆಯ ಫಲಿತಾಂಶಗಳನ್ನು ಸ್ಪಷ್ಟವಾಗಿ ತಳ್ಳಿಹಾಕಿದೆ
ಟುಡೇಸ್ ಚಾಣಕ್ಯ ಸಮೀಕ್ಷೆ ವಿವರ:
ಬಿಜೆಪಿ+ 51 ± 6 ಸ್ಥಾನಗಳು
ಎಎಪಿ 19 ± 6 ಸ್ಥಾನಗಳು
ಇತರರು 0 ± 3 ಸ್ಥಾನಗಳು