ಮುಂಬಯಿ: ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಸರ್ಕಾರದ ಮನವಿಯನ್ನು ತಿರಸ್ಕರಿಸಿದ ಸುಪ್ರೀಂ ಕೋರ್ಟ್, ನಾಳೆ ಮಹಾರಾಷ್ಟ್ರ ವಿಧಾನಸಭೆಯಲ್ಲಿ ವಿಶ್ವಾಸಮತ ಪರೀಕ್ಷೆಗೆ ತಡೆ ನೀಡಲು ನಿರಾಕರಿಸಿದ ಬೆನ್ನಲ್ಲೇ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ರಾಜೀನಾಮೆ ನೀಡಿದ್ದಾರೆ.
ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಜೆಬಿ ಪರ್ದಿವಾಲಾ ಅವರ ರಜಾಕಾಲದ ಪೀಠವು ಶಿವಸೇನೆ, ಏಕನಾಥ್ ಶಿಂಧೆ ನೇತೃತ್ವದ ಬಂಡಾಯ ಶಾಸಕರು ಮತ್ತು ರಾಜ್ಯಪಾಲರ ಪರವಾಗಿ ಹೈಬ್ರಿಡ್ ಮೋಡ್ ಮೂಲಕ ವಾದವನ್ನು ಆಲಿಸಿತು.
ಶಿವಸೇನೆಯ ಬಂಡಾಯ ಶಾಸಕರಿರುವ ವಿಶೇಷ ವಿಮಾನ ಗೋವಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದೆ.
ಮುಂಬೈನ ತಾಜ್ ಪ್ರೆಸಿಡೆಂಟ್ ಹೋಟೆಲ್‌ನಲ್ಲಿ ಶಾಸಕಾಂಗ ಸಭೆಗಾಗಿ ಮಹಾರಾಷ್ಟ್ರದ ಮಾಜಿ ಸಿಎಂ ಮತ್ತು ಬಿಜೆಪಿ ನಾಯಕ ದೇವೇಂದ್ರ ಫಡ್ನವಿಸ್ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಚಂದ್ರಕಾಂತ ಪಾಟೀಲ್ ಮತ್ತು ಇತರ ನಾಯಕರು ಸಭೆ ನಡೆಸಿದ್ದಾರೆ.