ನವದೆಹಲಿ, ಜ.3: ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ದೇಶದ ಮೊದಲ ವಂದೇ ಭಾರತ್ ಸ್ಲೀಪರ್ ರೈಲನ್ನು ಪರಿಶೀಲಿಸಿದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ರೈಲು ರಾತ್ರಿಯ ದೀರ್ಘ ಪ್ರಯಾಣಕ್ಕಾಗಿ ವಿನ್ಯಾಸಗೊಳಿಸಲಾಗಿದೆ ಎಂದು ಹೇಳಿದರು. ಸಂಪೂರ್ಣ ಹವಾನಿಯಂತ್ರಿತ ಸ್ಲೀಪರ್ ಸೇವೆಯನ್ನು ಈ ತಿಂಗಳ ದ್ವಿತೀಯಾರ್ಧದಲ್ಲಿ ಗುವಾಹಟಿ ಮತ್ತು ಕೋಲ್ಕತ್ತಾ ನಡುವೆ ಚಾಲನೆ ನೀಡಲಾಗುವುದು ಎಂದು ಸಚಿವರು ಹೇಳಿದರು.
ವೇಗದ ಪ್ರಯಾಣ, ಉತ್ತಮ ಸೌಕರ್ಯ ಮತ್ತು ಆಧುನಿಕ ಸುರಕ್ಷತಾ ವ್ಯವಸ್ಥೆಗಳ ಭರವಸೆಯನ್ನು ವಂದೇ ಭಾರತ್ ನೀಡುತ್ತದೆ ಎಂದು ಅವರು ಹೇಳಿದರು. ಆರಾಮದಾಯಕ ಸ್ಲೀಪರ್ ಬರ್ತ್‌ಗಳು, ಸ್ವಯಂಚಾಲಿತ ಬಾಗಿಲುಗಳು ಮತ್ತು ಆಧುನಿಕ ಶೌಚಾಲಯಗಳು ಸೇರಿದಂತೆ ಅತ್ಯಾಧುನಿಕ ಪ್ರಯಾಣಿಕರ ಸೌಲಭ್ಯಗಳನ್ನು ಈ ರೈಲು ಹೊಂದಿದೆ ಎಂದು ಸಚಿವ ವೈಷ್ಣವ್ ಹೇಳಿದರು.




By
ForthFocus™