ವಯನಾಡ್ (ಕೇರಳ), ಏ.21: ವಯನಾಡ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪಿ.ಎಂ. ಸುಧಾಕರನ್ ಭಾನುವಾರ ಕೈಗೆ ಗುಡ್ ಬೈ ಹೇಳಿ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಬಳಿಕ ಮಾತನಾಡಿದ ಅವರು, ವಯನಾಡ್ ಸಂಸದ ರಾಹುಲ್ ಗಾಂಧಿಯವರು ಸಂಪರ್ಕಕ್ಕೆ ಸಿಗಲಿಲ್ಲ. ಸಾಮಾನ್ಯ ಜನರಿಗೆ ಇವರು ಹೇಗೆ ಸಿಗುತ್ತಾರೆ? ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯುಳ್ಳ ನಾಯಕತ್ವವನ್ನು ಮೆಚ್ಚಿ ಬಿಜೆಪಿಗೆ ಸೇರ್ಪಡೆಯಾಗಿದ್ದೇನೆ ಎಂದು ಸುಧಾಕರನ್ ಹೇಳಿದ್ದಾರೆ.
2019 ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ 20 ರಲ್ಲಿ 19 ಕ್ಷೇತ್ರಗಳನ್ನು ಗೆದ್ದುಕೊಂಡಿದನ್ನು ಇಲ್ಲಿ ಸ್ಮರಿಸಬಹುದು. ಇದರಲ್ಲಿ ಕಾಂಗ್ರೆಸ್ 15 ಸ್ಥಾನಗಳನ್ನು ಗಳಿಸಿದರೆ, ಕಾಂಗ್ರೆಸ್ ಮಿತ್ರ ಪಕ್ಷವಾದ ಮುಸ್ಲಿಂ ಲೀಗ್ 2 ಕ್ಷೇತ್ರಗಳನ್ನು ಪಡೆದುಕೊಂಡಿತು.