ತಿರುಪತಿ, ಸೆ.20: ತಿರುಪತಿ ಬಾಲಾಜಿ ಪ್ರಸಾದದಲ್ಲಿ ಬೆರೆತಿರುವ ಪ್ರಾಣಿಗಳ ಕೊಬ್ಬನ್ನು (ಮೀನಿನ ಎಣ್ಣೆ, ಹಂದಿಯ ಕೊಬ್ಬು ಮತ್ತು ಗೋಮಾಂಸದ ಕೊಬ್ಬು) ಕಂಡುಹಿಡಿದಿರುವುದರಿಂದ ನಾವೆಲ್ಲರೂ ತೀವ್ರವಾಗಿ ವಿಚಲಿತರಾಗಿದ್ದೇವೆ. ಹಿಂದಿನ ವೈಸಿಪಿ ಸರ್ಕಾರ ರಚಿಸಿರುವ ಟಿಟಿಡಿ ಮಂಡಳಿಯು ಹಲವು ಪ್ರಶ್ನೆಗಳಿಗೆ ಉತ್ತರಿಸಬೇಕಾಗಿದೆ. ನಮ್ಮ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲು ಬದ್ಧವಾಗಿದೆ ಎಂದು ಆಂಧ್ರಪ್ರದೇಶ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಹೇಳಿದ್ದಾರೆ. ಆದರೆ, ಇದು ದೇವಾಲಯಗಳ ಅಪವಿತ್ರತೆ, ಅದರ ಭೂಮಿ ಸಮಸ್ಯೆಗಳು ಮತ್ತು ಇತರ ಧಾರ್ವಿುಕ ಆಚರಣೆಗಳ ಸುತ್ತಲಿನ ಅನೇಕ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲುತ್ತದೆ. ಇಡೀ ಭಾರತದಲ್ಲಿರುವ ದೇವಾಲಯಗಳಿಗೆ ಸಂಬಂಧಿಸಿದ ಎಲ್ಲಾ ಸಮಸ್ಯೆಗಳನ್ನು ಪರಿಶೀಲಿಸಲು ರಾಷ್ಟ್ರೀಯ ಮಟ್ಟದಲ್ಲಿ ‘ಸನಾತನ ಧರ್ಮ ರಕ್ಷಣಾ ಮಂಡಳಿ’ಯನ್ನು ಸ್ಥಾಪಿಸುವ ಸಮಯ ಬಂದಿದೆ. ರಾಷ್ಟ್ರೀಯ ಮಟ್ಟದಲ್ಲಿ ಎಲ್ಲಾ ನೀತಿ ನಿರೂಪಕರು, ಧಾರ್ಮಿಕ ಮುಖ್ಯಸ್ಥರು, ನ್ಯಾಯಾಂಗ, ನಾಗರಿಕರು, ಮಾಧ್ಯಮಗಳು ಮತ್ತು ಅವರವರ ಕ್ಷೇತ್ರಗಳಲ್ಲಿ ಚರ್ಚೆ ನಡೆಯಬೇಕು. ‘ಸನಾತನ ಧರ್ಮ’ವನ್ನು ಯಾವುದೇ ರೂಪದಲ್ಲಿ ಅಪವಿತ್ರಗೊಳಿಸುವುದನ್ನು ಕೊನೆಗೊಳಿಸಲು ನಾವೆಲ್ಲರೂ ಒಗ್ಗೂಡಬೇಕು ಎಂದು ನಾನು ಭಾವಿಸುತ್ತೇನೆ ಎಂದು ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಹೇಳಿದ್ದಾರೆ.
ಸನಾತನ ಧರ್ಮವನ್ನು ಅಪವಿತ್ರಗೊಳಿಸುವುದನ್ನು ಕೊನೆಗೊಳಿಸಲು ನಾವೆಲ್ಲರೂ ಒಗ್ಗೂಡಬೇಕು: ಪವನ್ ಕಲ್ಯಾಣ್
ಸನಾತನ ಧರ್ಮವನ್ನು ಅಪವಿತ್ರಗೊಳಿಸುವುದನ್ನು ಕೊನೆಗೊಳಿಸಲು ನಾವೆಲ್ಲರೂ ಒಗ್ಗೂಡಬೇಕು: ಪವನ್ ಕಲ್ಯಾಣ್
Date: