Home ಸುದ್ಧಿಗಳು ರಾಷ್ಟ್ರೀಯ ಜನನಿಬಿಡ ಸ್ಥಳಗಳಲ್ಲಿ ಮಾಸ್ಕ್ ಧರಿಸಿ- ಕೇಂದ್ರ ಸರ್ಕಾರದ ಸಲಹೆ

ಜನನಿಬಿಡ ಸ್ಥಳಗಳಲ್ಲಿ ಮಾಸ್ಕ್ ಧರಿಸಿ- ಕೇಂದ್ರ ಸರ್ಕಾರದ ಸಲಹೆ

911
0

ನವದೆಹಲಿ: ಚೀನಾದಲ್ಲಿ ಕೋವಿಡ್ ಆರ್ಭಟ ಹೆಚ್ಚಾಗುತ್ತಿದೆ. ಮತ್ತೊಂದೆಡೆ ಜಪಾನ್, ದಕ್ಷಿಣ ಕೊರಿಯಾ, ಬ್ರೆಜಿಲ್ ಮತ್ತು ಅಮೆರಿಕದಲ್ಲಿಯೂ ಕೋವಿಡ್ ಪ್ರಕರಣಗಳಲ್ಲಿ ವ್ಯಾಪಕ ಏರಿಕೆ ಕಂಡುಬರುತ್ತಿರುವ ಹಿನ್ನಲೆಯಲ್ಲಿ, ಹೆಚ್ಚಿನ ಜನರು ಇರುವ ಸ್ಥಳಗಳ್ಲಲಿ ಮಾಸ್ಕ್ ಧರಿಸುವಂತೆ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಸಲಹೆ ನೀಡಿದ್ದಾರೆ. ಉನ್ನತ ಮಟ್ಟದ ಪರಿಶೀಲನಾ ಸಭೆಯ ಬಳಿಕ ಈ ನಿರ್ಧಾರ ಕೈಗೊಳ್ಳಲಾಗಿದೆ.

ರಾಜ್ಯದಲ್ಲಿಯೂ ಮಾರ್ಗಸೂಚಿ? ಕೋವಿಡ್ ಪಾಸಿಟಿವ್ ಬರುವವರ ಮೇಲೆ ಹೆಚ್ಚಿನ ನಿಗಾ ವಹಿಸಿದ್ದೇವೆ. ಶೀಘ್ರದಲ್ಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಭೆ ನಡೆಸಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ಹೇಳಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.