ನವದೆಹಲಿ, ನ.5: ಭಯೋತ್ಪಾದನೆಯ ಬಗ್ಗೆ ಶೂನ್ಯ ಸಹಿಷ್ಣುತೆಯನ್ನು ಭಾರತ ಮತ್ತು ಇಸ್ರೇಲ್ ಪುನರುಚ್ಚರಿಸಿವೆ. ಎರಡು ದಿನಗಳ ಭಾರತ ಭೇಟಿಯಲ್ಲಿರುವ ಇಸ್ರೇಲ್ ವಿದೇಶಾಂಗ ಸಚಿವ ಗಿಡಿಯಾನ್ ಸಾರ್ ಕೇಂದ್ರ ವಿದೇಶಾಂಗ ಸಚಿವರಾದ ಡಾ. ಎಸ್. ಜೈಶಂಕರ್ ಅವರನ್ನು ನವದೆಹಲಿಯಲ್ಲಿ ಭೇಟಿಯಾಅಗಿ ಮಾತುಕತೆ ನಡೆಸಿದರು.
ಭಾರತ-ಇಸ್ರೇಲ್ ಕಾರ್ಯತಂತ್ರದ ಪಾಲುದಾರಿಕೆ ಒಳಗೊಂಡಂತೆ ಇಬ್ಬರೂ ಸಚಿವರು ಚರ್ಚೆಗಳನ್ನು ನಡೆಸಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ಹೇಳಿದೆ. ರಾಜಕೀಯ, ಭದ್ರತೆ, ಕೃಷಿ, ವ್ಯಾಪಾರ ಮತ್ತು ಹೂಡಿಕೆ, ರಕ್ಷಣೆ ಮತ್ತು ಜನರಿಂದ ಜನರ ಸಂಬಂಧಗಳು, ಹಾಗೆಯೇ ನಿರ್ಣಾಯಕ ಮತ್ತು ಉದಯೋನ್ಮುಖ ತಂತ್ರಜ್ಞಾನಗಳು, ಸೆಮಿಕಂಡಕ್ಟರ್‌ಗಳು, ಸೈಬರ್ ಭದ್ರತೆ ಮತ್ತು ಎಐ ಸೇರಿದಂತೆ ಕ್ಷೇತ್ರಗಳಲ್ಲಿ ನಡೆಯುತ್ತಿರುವ ಸಹಕಾರದ ಬಗ್ಗೆಯೂ ಚರ್ಚೆ ನಡೆದಿದೆ.
ಸುಷ್ಮಾ ಸ್ವರಾಜ್ ಇನ್ಸ್ಟಿಟ್ಯೂಟ್ ಆಫ್ ಫಾರಿನ್ ಸರ್ವಿಸ್ ಮತ್ತು ಇಸ್ರೇಲ್ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ನಡುವೆ ತರಬೇತಿಯ ಕುರಿತು ತಿಳುವಳಿಕೆ ಪತ್ರವನ್ನು ಎರಡೂ ರಾಷ್ಟ್ರಗಳು ವಿನಿಮಯ ಮಾಡಿಕೊಂಡಿವೆ.




By
ForthFocus™