Sunday, September 27, 2026
Sunday, September 27, 2026

ಭಯೋತ್ಪಾದನೆಯ ಬಗ್ಗೆ ಶೂನ್ಯ ಸಹಿಷ್ಣುತೆ

ಭಯೋತ್ಪಾದನೆಯ ಬಗ್ಗೆ ಶೂನ್ಯ ಸಹಿಷ್ಣುತೆ

Date:

ನವದೆಹಲಿ, ನ.5: ಭಯೋತ್ಪಾದನೆಯ ಬಗ್ಗೆ ಶೂನ್ಯ ಸಹಿಷ್ಣುತೆಯನ್ನು ಭಾರತ ಮತ್ತು ಇಸ್ರೇಲ್ ಪುನರುಚ್ಚರಿಸಿವೆ. ಎರಡು ದಿನಗಳ ಭಾರತ ಭೇಟಿಯಲ್ಲಿರುವ ಇಸ್ರೇಲ್ ವಿದೇಶಾಂಗ ಸಚಿವ ಗಿಡಿಯಾನ್ ಸಾರ್ ಕೇಂದ್ರ ವಿದೇಶಾಂಗ ಸಚಿವರಾದ ಡಾ. ಎಸ್. ಜೈಶಂಕರ್ ಅವರನ್ನು ನವದೆಹಲಿಯಲ್ಲಿ ಭೇಟಿಯಾಅಗಿ ಮಾತುಕತೆ ನಡೆಸಿದರು.

ಭಾರತ-ಇಸ್ರೇಲ್ ಕಾರ್ಯತಂತ್ರದ ಪಾಲುದಾರಿಕೆ ಒಳಗೊಂಡಂತೆ ಇಬ್ಬರೂ ಸಚಿವರು ಚರ್ಚೆಗಳನ್ನು ನಡೆಸಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ಹೇಳಿದೆ. ರಾಜಕೀಯ, ಭದ್ರತೆ, ಕೃಷಿ, ವ್ಯಾಪಾರ ಮತ್ತು ಹೂಡಿಕೆ, ರಕ್ಷಣೆ ಮತ್ತು ಜನರಿಂದ ಜನರ ಸಂಬಂಧಗಳು, ಹಾಗೆಯೇ ನಿರ್ಣಾಯಕ ಮತ್ತು ಉದಯೋನ್ಮುಖ ತಂತ್ರಜ್ಞಾನಗಳು, ಸೆಮಿಕಂಡಕ್ಟರ್‌ಗಳು, ಸೈಬರ್ ಭದ್ರತೆ ಮತ್ತು ಎಐ ಸೇರಿದಂತೆ ಕ್ಷೇತ್ರಗಳಲ್ಲಿ ನಡೆಯುತ್ತಿರುವ ಸಹಕಾರದ ಬಗ್ಗೆಯೂ ಚರ್ಚೆ ನಡೆದಿದೆ.

ಸುಷ್ಮಾ ಸ್ವರಾಜ್ ಇನ್ಸ್ಟಿಟ್ಯೂಟ್ ಆಫ್ ಫಾರಿನ್ ಸರ್ವಿಸ್ ಮತ್ತು ಇಸ್ರೇಲ್ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ನಡುವೆ ತರಬೇತಿಯ ಕುರಿತು ತಿಳುವಳಿಕೆ ಪತ್ರವನ್ನು ಎರಡೂ ರಾಷ್ಟ್ರಗಳು ವಿನಿಮಯ ಮಾಡಿಕೊಂಡಿವೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಟಾಟಾ ಏರಿಸ್ ಬಿಡುಗಡೆ: ಮಾರುತಿ ಡಿಜೈರ್‌ಗೆ ಹೊಸ ಪ್ರತಿಸ್ಪರ್ಧಿಯಾಗಲಿದೆಯೇ ಈ ಕಾರು?

ನವದೆಹಲಿ, ಸೆ.26: ಟಾಟಾ ಮೋಟಾರ್ಸ್ ಭಾರತದಲ್ಲಿ 'ಏರಿಸ್' ಅನ್ನು ರೂ. 5.29...

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಶಾಶ್ವತ ಸ್ಥಾನಕ್ಕಾಗಿ ಭಾರತದ ಪ್ರಯತ್ನಕ್ಕೆ ಪೋರ್ಚುಗಲ್ ಮತ್ತು ಮಾರಿಷಸ್ ಬೆಂಬಲ

ನವದೆಹಲಿ, ಸೆ.26: ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಶಾಶ್ವತ ಸ್ಥಾನ ಪಡೆಯುವ ಭಾರತದ...

ಏಷ್ಯನ್ ಗೇಮ್ಸ್‌ ಕಬಡ್ಡಿ: ಭಾರತಕ್ಕೆ ಅವಳಿ ಚಿನ್ನ

ಯು.ಬಿ.ಎನ್.ಡಿ., ಸೆ.26: ಜಪಾನ್‌ನಲ್ಲಿ ನಡೆಯುತ್ತಿರುವ ಐಚಿ-ನಗೋಯಾ ಏಷ್ಯನ್ ಗೇಮ್ಸ್ 2026ರಲ್ಲಿ ಭಾರತದ...

ಎಸ್.ಐ.ಆರ್ ಆದೇಶ ಸರ್ವಾನುಮತದಿಂದ ಅನುಮೋದನೆ: ಚುನಾವಣಾ ಆಯೋಗ

ನವದೆಹಲಿ, ಸೆ.26: ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಎಸ್.ಐ.ಆರ್ ಆದೇಶ...
error: Content is protected !!