Wednesday, September 30, 2026
Wednesday, September 30, 2026

ಪಿ.ಎಂ.ಇ.ಜಿ.ಪಿ ಯೋಜನೆ: ಸ್ವ-ಉದ್ಯೋಗಕ್ಕೆ ಅರ್ಜಿ ಆಹ್ವಾನ

ಪಿ.ಎಂ.ಇ.ಜಿ.ಪಿ ಯೋಜನೆ: ಸ್ವ-ಉದ್ಯೋಗಕ್ಕೆ ಅರ್ಜಿ ಆಹ್ವಾನ

Date:

ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿಗಳ ಉದ್ಯೋಗ ಸೃಜನ ಯೋಜನೆ (ಪಿಎಂಇಜಿಪಿ) ಯಡಿ ಜಿಲ್ಲೆಯಲ್ಲಿ ಸ್ವ-ಉದ್ಯೋಗ ಆರಂಭಿಸಲು ಆಸಕ್ತಿ ಇರುವ ನಿರುದ್ಯೋಗಿ ಯುವಕ, ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಯೋಜನೆಯಡಿಯಲ್ಲಿ ನಿರುದ್ಯೋಗಿ ಯುವಕ ಹಾಗೂ ಯುವತಿಯರಿಗೆ ಗರಿಷ್ಠ ಯೋಜನಾ ವೆಚ್ಚ 25 ಲಕ್ಷ ರೂ. ಬ್ಯಾಂಕ್ ಸಾಲದೊಂದಿಗೆ ಹೊಸ ಕೈಗಾರಿಕೆ ಉತ್ಪಾದನೆ ಚಟುವಟಿಕೆ ಹಾಗೂ ಆಯ್ದ ಕೆಲವು ಸೇವಾ ಘಟಕ ಸ್ಥಾಪಿಸುವವರಿಗೆ ಅವಕಾಶವಿದ್ದು, ಯೋಜನಾ ವೆಚ್ಚದ ಮೇಲೆ ಶೇ. 15 ರಿಂದ 35 ರವರೆಗೆ ಸಹಾಯಧನ ನೀಡಲಾಗುವುದು.

ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನ. ಅರ್ಜಿಯನ್ನು https://www.kviconline.gov.in/pmegpeportal/jsp/pmegponline.jsp
ವೆಬ್‌ಸೈಟ್ ಮೂಲಕ ಸಲ್ಲಿಸುವಾಗ ಫೋಟೊ, ಯೋಜನಾ ವರದಿ, ಜಾತಿ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಜನಸಂಖ್ಯೆ ಪ್ರಮಾಣ ಪತ್ರ ಹಾಗೂ ವಿದ್ಯಾಭ್ಯಾಸದ ದಾಖಲಾತಿಗಳನ್ನು ಅಪ್‌ಲೋಡ್ ಮಾಡಿದ ನಂತರ ಅರ್ಜಿಯನ್ನು ಪ್ರಿಂಟ್ ಮಾಡಿ ಸಂಬಂಧಪಟ್ಟ ದಾಖಲಾತಿಗಳೊಂದಿಗೆ ಜಂಟಿ ನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರ, ಶಿವಳ್ಳಿ ಕೈಗಾರಿಕಾ ಪ್ರದೇಶ, ಮಣಿಪಾಲ, ಉಡುಪಿ ದೂ.ಸಂಖ್ಯೆ: 0820-2575650, ಜಿಲ್ಲಾ ಅಧಿಕಾರಿಗಳು, ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ, ರಜತಾದ್ರಿ, 2ನೇ ಮಹಡಿ, ಮಣಿಪಾಲ, ಉಡುಪಿ ದೂ.ಸಂಖ್ಯೆ: 0820-2574855, ರಾಜ್ಯ ನಿರ್ದೇಶಕರು, ಖಾದಿ ಗ್ರಾಮೋದ್ಯೋಗ ಆಯೋಗ, ದೂರವಾಣಿ ನಗರ, ವಿಜಿನಾಪುರ, ಬೆಂಗಳೂರು ದೂ.ಸಂಖ್ಯೆ: 080-25665885 / 080-25665883 ಹಾಗೂ ಪ್ರಾದೇಶಿಕ ಕಛೇರಿ, ಕಾಯರ್ ಬೋರ್ಡ್, ನಂ: 3ಎ, ಪೀಣ್ಯಾ ಕೈಗಾರಿಕಾ ಪ್ರದೇಶ, ಟಿವಿಎಸ್ ಕ್ರಾಸ್ ಹತ್ತಿರ, ಬೆಂಗಳೂರು, ದೂ.ಸಂಖ್ಯೆ: 080-28375023 ಇವರ ಕಚೇರಿಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕೈಗಾರಿಕಾ ಕೇಂದ್ರ, ಶಿವಳ್ಳಿ ಕೈಗಾರಿಕಾ ಪ್ರದೇಶ, ಮಣಿಪಾಲ, ಉಡುಪಿ ಹಾಗೂ ಉಡುಪಿ, ಕಾರ್ಕಳ ಅಥವಾ ಕುಂದಾಪುರ ಕೈಗಾರಿಕಾ ವಿಸ್ತರಣಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸುವಂತೆ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

1 COMMENT

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕೆ.ಎಸ್.ಆರ್.ಟಿ.ಸಿ: ಅ. 11 -20- ಉಡುಪಿಯಿಂದ ನವರಾತ್ರಿ ವಿಶೇಷ ಪ್ಯಾಕೇಜ್ ಪ್ರವಾಸ

ಉಡುಪಿ, ಸೆ.30: ಕ.ರಾ.ರ.ಸಾ.ನಿಗಮ ಮಂಗಳೂರು ವಿಭಾಗವು ದಸರಾ ಪ್ರಯುಕ್ತ ಉಡುಪಿ ಘಟಕದಿಂದ...

ʼಕಬ್ಬದುಳುಮೆʼ ಕಾವ್ಯಲೋಕದ ಓದಿನ ಹೊಸಪರಿ

ಹಿರಿಯಡಕ, ಸೆ.30: ಹಳಗನ್ನಡ ಪಠ್ಯಗಳ ಸಂಧಿಬಂಧಗಳನ್ನು ಒಡೆದು ಒಳಗಿನ ತಿಳಿವನ್ನು ಅರಗಿಸಿಕೊಳ್ಳುವ...

ಕೋಟೇಶ್ವರ: ವಿದ್ಯಾರ್ಥಿ ಸಂಘ ಉದ್ಘಾಟನೆ

ಕೋಟೇಶ್ವರ, ಸೆ.30: ಯುವಕರಲ್ಲಿ ನಾಯಕತ್ವ ಗುಣವನ್ನು ಬೆಳೆಸುವಲ್ಲಿ ಕಾಲೇಜು ಹಂತದಲ್ಲಿ ವಿದ್ಯಾರ್ಥಿ...

ಹಿರಿಯ ನಾಗರಿಕರು ಹಿಂಜರಿಕೆಯಿಲ್ಲದೆ ಮುಕ್ತವಾಗಿ ಸ್ಪರ್ಧೆಗಳಲ್ಲಿ ಭಾಗವಹಿಸಿ: ನ್ಯಾ. ನಿತಿನ್ ಯಶ್ವಂತ್ ರಾವ್

ಉಡುಪಿ, ಸೆ.30: ವಯಸ್ಸು ಕೇವಲ ದೇಹಕ್ಕೆ ಮಾತ್ರ ಮನಸ್ಸಿಗಲ್ಲ ಎಂಬ ಚಿಂತನೆಯೊಂದಿಗೆ...
error: Content is protected !!