ಉಡುಪಿ: ಜಿಲ್ಲಾ ಪಂಚಾಯತ್ ವತಿಯಿಂದ ಮಹಾತ್ಮ ಗಾಂಧಿ ಉದ್ಯೋಗ ಖಾತರಿ ಯೋಜನೆಯಡಿ ಜಿಲ್ಲೆಯ ವಿವಿಧ ತಾಲೂಕುಗಳ ಗ್ರಾಮ ಪಂಚಾಯತ್ಗಳಲ್ಲಿ ಖಾಲಿ ಇರುವ ಭೇರ್ ಫುಟ್ ಟೆಕ್ನಿಷಿಯನ್ ಹುದ್ದೆಗೆ ಗೌರವ ಧನದ ಆಧಾರದಲ್ಲಿ ಕರ್ತವ್ಯ ನಿರ್ವಹಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಕನಿಷ್ಠ ಹತ್ತನೇ ತರಗತಿ ಉತ್ತೀರ್ಣರಾಗಿರುವ, ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಸಕ್ರೀಯ ಕೆಲಸಗಾರನಾಗಿರುವ 45 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಜನವರಿ 15 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಗ್ರಾಮ ಪಂಚಾಯತ್ ಅಥವಾ ತಾಲೂಕು ಪಂಚಾಯತ್ ಕಚೇರಿಯನ್ನು ಸಂಪರ್ಕಿಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.