ಉಡುಪಿ: ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕ.ರಾ.ಮು.ವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಐ.ಬಿ.ಪಿ.ಎಸ್ ರಾಷ್ಟ್ರೀಕೃತ ಬ್ಯಾಂಕ್‌ನವರು ವಿವಿಧ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 45 ದಿನಗಳ ತರಬೇತಿ ನೀಡಲಿದ್ದು, ಆಸಕ್ತರು ಜನವರಿ 5 ರ ಒಳಗೆ ಬೆಳಗ್ಗೆ 10 ರಿಂದ ಸಂಜೆ 4 ರ ವರೆಗೆ ದೂ.ಸಂಖ್ಯೆ: 0821-2515944 ಗೆ ಕರೆಮಾಡಿ, ತರಬೇತಿಗೆ ಹೆಸರನ್ನು ನೊಂದಾಯಿಸಿಕೊಳ್ಳುವಂತೆ ಕರಾಮುವಿ ಕುಲಸಚಿವ ಪ್ರೊ. ಆರ್. ರಾಜಣ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
