ಉಡುಪಿ: ರಿಲಯನ್ಸ್ ನಿಪೊನ್ ಲೈಫ್ ಇನ್ಸುರೆಸ್ಸ್ ಮತ್ತು ಸೊಯ್ಯೋದಯ ಎ ಬ್ಯಾಂಕ್ ಆಫ್ ಸ್ಮಯಿಲ್ ಕಂಪನಿ ವತಿಯಿಂದ ಮೇ 23 ರಂದು ಬೆಳಗ್ಗೆ 09:45 ರಿಂದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಸಂಕೀರ್ಣದ ಉದ್ಯೋಗ ವಿನಿಮಯ ಕಛೇರಿಯಲ್ಲಿ ನೇರ ಸಂದರ್ಶನವನ್ನು ಆಯೋಜಿಸಲಾಗಿದೆ.
ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಬಿ.ಕಾಂ, ಎಮ್.ಎಸ್ಸಿ, ಬಿ.ಇ ಇಂಜಿನಿಯರಿಂಗ್ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವ-ವಿವರವುಳ್ಳ ರೆಸ್ಯೂಮ್ ಹಾಗೂ ಆಧಾರ್ ಕಾರ್ಡ್ ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಉದ್ಯೋಗಾಧಿಕಾರಿ, ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ ಮೊ.ನಂ: 9945856670, 8105618291 ಮತ್ತು 8197440155 ನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.