ರಾಜ್ಯ ಸರ್ಕಾರದ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಪ್ರಾಯೋಜಕತ್ವದಲ್ಲಿ, ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ (ಸಿಡಾಕ್) ಉಡುಪಿ ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳ ಅಧ್ಯಯನ ಮತ್ತು ಅಭಿವೃದ್ಧಿ ಟ್ರಸ್ಟ್ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ, ಸ್ವಂತ ಉದ್ಯೋಗವನ್ನು ಸ್ಥಾಪಿಸಲು ಇಚ್ಚಿಸುವವರಿಗೆ ಜುಲೈ 23 ರಂದು ಮಧ್ಯಾಹ್ನ 2 ಗಂಟೆಗೆ ಪಡುಬಿದ್ರಿಯ ಸುಜಲಾನ್ ಆರ್.ಆರ್. ಕಾಲೋನಿ ಸಭಾಭವನದಲ್ಲಿ ಒಂದು ದಿನದ ಉದ್ಯಮಶೀಲತಾ ತಿಳುವಳಿಕೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, 18 ರಿಂದ 40 ವರ್ಷ ವರ್ಷದೊಳಗಿನ, ಎಸ್.ಎಸ್.ಎಲ್.ಸಿ. ಪಾಸಾದ ಅಭ್ಯರ್ಥಿಗಳು ಭಾಗವಹಿಸಬಹುದಾಗಿದೆ.
ಕಾರ್ಯಕ್ರಮದಲ್ಲಿ ಉದ್ಯಮಶೀಲನ ಗುಣಲಕ್ಷಣಗಳು, ಸ್ವಂತ ಉದ್ಯಮವನ್ನು ಸ್ಥಾಪಿಸಲು ಅನುಸರಿಸಬೇಕಾದ ಕ್ರಮಗಳು, ಸರ್ಕಾರದ ಸ್ವಂತ ಉದ್ಯೋಗ ಯೋಜನೆಗಳು, ಬ್ಯಾಂಕಿನ ವ್ಯವಹಾರ, ಉದ್ಯಮ ನಿರ್ವಹಣೆ, ಇತ್ಯಾದಿ ವಿಷಯಗಳ ಕುರಿತು ಮಾಹಿತಿಗಳನ್ನು ನೀಡಲಾಗುವುದು, ಹೆಚ್ಚಿನ ಮಾಹಿತಿಗಾಗಿ ಮೊ.ನಂ: 8217530146 ಅನ್ನು ಸಂಪರ್ಕಿಸುವಂತೆ ಸಿಡಾಕ್‌ನ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.