Sunday, September 13, 2026
Sunday, September 13, 2026

ಉದ್ಯಮಶೀಲತಾ ತಿಳುವಳಿಕೆ ಕಾರ್ಯಕ್ರಮ

ಉದ್ಯಮಶೀಲತಾ ತಿಳುವಳಿಕೆ ಕಾರ್ಯಕ್ರಮ

Date:

ರಾಜ್ಯ ಸರ್ಕಾರದ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಪ್ರಾಯೋಜಕತ್ವದಲ್ಲಿ, ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ (ಸಿಡಾಕ್) ಉಡುಪಿ ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳ ಅಧ್ಯಯನ ಮತ್ತು ಅಭಿವೃದ್ಧಿ ಟ್ರಸ್ಟ್ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ, ಸ್ವಂತ ಉದ್ಯೋಗವನ್ನು ಸ್ಥಾಪಿಸಲು ಇಚ್ಚಿಸುವವರಿಗೆ ಜುಲೈ 23 ರಂದು ಮಧ್ಯಾಹ್ನ 2 ಗಂಟೆಗೆ ಪಡುಬಿದ್ರಿಯ ಸುಜಲಾನ್ ಆರ್.ಆರ್. ಕಾಲೋನಿ ಸಭಾಭವನದಲ್ಲಿ ಒಂದು ದಿನದ ಉದ್ಯಮಶೀಲತಾ ತಿಳುವಳಿಕೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, 18 ರಿಂದ 40 ವರ್ಷ ವರ್ಷದೊಳಗಿನ, ಎಸ್.ಎಸ್.ಎಲ್.ಸಿ. ಪಾಸಾದ ಅಭ್ಯರ್ಥಿಗಳು ಭಾಗವಹಿಸಬಹುದಾಗಿದೆ.

ಕಾರ್ಯಕ್ರಮದಲ್ಲಿ ಉದ್ಯಮಶೀಲನ ಗುಣಲಕ್ಷಣಗಳು, ಸ್ವಂತ ಉದ್ಯಮವನ್ನು ಸ್ಥಾಪಿಸಲು ಅನುಸರಿಸಬೇಕಾದ ಕ್ರಮಗಳು, ಸರ್ಕಾರದ ಸ್ವಂತ ಉದ್ಯೋಗ ಯೋಜನೆಗಳು, ಬ್ಯಾಂಕಿನ ವ್ಯವಹಾರ, ಉದ್ಯಮ ನಿರ್ವಹಣೆ, ಇತ್ಯಾದಿ ವಿಷಯಗಳ ಕುರಿತು ಮಾಹಿತಿಗಳನ್ನು ನೀಡಲಾಗುವುದು, ಹೆಚ್ಚಿನ ಮಾಹಿತಿಗಾಗಿ ಮೊ.ನಂ: 8217530146 ಅನ್ನು ಸಂಪರ್ಕಿಸುವಂತೆ ಸಿಡಾಕ್‌ನ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮೂರೂರು-ಹಿರ್ಗಾನ: 3 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಂಭ್ರಮ; ಭಕ್ತರಿಂದ ರಜತ ಕಿರೀಟ ಹಾಗೂ ತ್ರಿಶೂಲ ಸಮರ್ಪಣೆ

ಹಿರ್ಗಾನ, ಸೆ.12: ಶ್ರೀ ಮಹಾಗಣಪತಿ ಗಣೇಶೋತ್ಸವ ಸಮಿತಿ ಮೂರೂರು ಹಿರ್ಗಾನ ಇಲ್ಲಿನ...

ಸೆ. 16: ಡಿ ಮಾರ್ಟ್ ನಲ್ಲಿ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಉಡುಪಿ, ಸೆ.11: ನಗರದ ಕಲ್ಸಂಕ ಜಂಕ್ಷನ್ ಬಳಿಯ ಭಾರತ್ ಪ್ರೆಸ್ ಎದುರುಗಡೆಯ...

ಉಡುಪಿ ರೆಡ್ ಕ್ರಾಸಿಗೆ ರಾಷ್ಟ್ರೀಯ ಸಮಿತಿ ಸದಸ್ಯರ ಭೇಟಿ

ಉಡುಪಿ, ಸೆ.11: ಭಾರತೀಯ ರೆಡ್ ಕ್ರಾಸ್ ಸೊಸೈಟಿ ನವದೆಹಲಿ ಇಲ್ಲಿನ ಆಡಳಿತ...
error: Content is protected !!