Home ಉದ್ಯೋಗಾವಕಾಶ ಆರೋಗ್ಯ ಇಲಾಖೆಯ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಆರೋಗ್ಯ ಇಲಾಖೆಯ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

696
0

ಉಡುಪಿ: ಕೋವಿಡ್-19 ಕೊರೋನಾ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ, ಜಿಲ್ಲಾಸ್ಪತ್ರೆಯಲ್ಲಿ ಪ್ರಕರಣಗಳನ್ನು ಸಮರ್ಪಕವಾಗಿ ನಿಭಾಯಿಸಲು ವೈದ್ಯಕೀಯ ಸೇವೆಯನ್ನು ಒದಗಿಸಲು ಅಗತ್ಯವಿರುವ ವೈದ್ಯರು / ತಜ್ಞರ -4 ಹುದ್ದೆ ಹಾಗೂ ಶುಶ್ರೂಷಕರ-6 ಹುದ್ದೆಗಳಿಗೆ ತಾತ್ಕಾಲಿಕವಾಗಿ ಮೂರು ತಿಂಗಳು ಅಥವಾ ಮುಂದಿನ ಆದೇಶದವರೆಗೆ ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲು, ಜನವರಿ 17 ರಂದು ಬೆಳಗ್ಗೆ 10 ಗಂಟೆಗೆ ನಗರದ ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಸರ್ಜನರ ಕಚೇರಿಯಲ್ಲಿ ನೇರ ಸಂದರ್ಶನ ನಡೆಯಲಿದೆ.

ಅಭ್ಯರ್ಥಿಗಳು ಅರ್ಜಿ ಹಾಗೂ ವಿದ್ಯಾರ್ಹತೆಗೆ ಸಂಬಂಧಿಸಿದ ಎಲ್ಲಾ ಅಂಕಪಟ್ಟಿಗಳ ಮೂಲ ಪ್ರತಿಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಕಚೇರಿಯ ದೂರವಾಣಿ ಸಂಖ್ಯೆ: 0820-2530333 ಅನ್ನು ಸಂಪರ್ಕಿಸುವಂತೆ ಜಿಲ್ಲಾ ಶಸ್ತ್ರಚಿಕಿತ್ಸಕರ ಕಚೇರಿ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.