Home ಉದ್ಯೋಗಾವಕಾಶ ಎಕ್ಸಿಕ್ಯೂಟಿವ್ ಕಾನ್‌ಸ್ಟೇಬಲ್ ಹುದ್ದೆ: ಅರ್ಜಿ ಆಹ್ವಾನ

ಎಕ್ಸಿಕ್ಯೂಟಿವ್ ಕಾನ್‌ಸ್ಟೇಬಲ್ ಹುದ್ದೆ: ಅರ್ಜಿ ಆಹ್ವಾನ

269
0

ಉಡುಪಿ, ಸೆ.16: ಸ್ಟಾಫ್ ಸೆಲೆಕ್ಷನ್ ಕಮೀಷನ್ ಕೇಂದ್ರ ನೇಮಕಾತಿ ಪ್ರಾಧಿಕಾರವು ದೆಹಲಿ ಪೋಲೀಸ್ ಪಡೆಗಳಲ್ಲಿ ಎಕ್ಸಿಕ್ಯೂಟಿವ್ ಕಾನ್‌ಸ್ಟೇಬಲ್ ಹುದ್ದೆಗಳ ನೇಮಕಾತಿಗೆ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು 2023 ರ ಜುಲೈ 1 ಕ್ಕೆ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 21 ರಿಂದ 25 ವರ್ಷ ವಯೋಮಿತಿ ಹೊಂದಿರುವ (ಇತರೆ ವರ್ಗಗಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ), ಮಾನ್ಯತೆ ಪಡೆದ ಮಂಡಳಿಯಿಂದ 10+2 ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಹಾಗೂ ಎಲ್.ಎಂ.ವಿ ವಾಹನಗಳ ಚಾಲನಾ ಪರವಾನಗಿ ಹೊಂದಿರುವ ಅಭ್ಯರ್ಥಿಗಳು ವೆಬ್‌ಸೈಟ್ http://www.ssckkr.kar.nic.in ಮತ್ತು https://ssc.nic.in ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಆನ್‌ಲೈನ್ ಮೂಲಕ ನೊಂದಣಿಗೆ ಸೆಪ್ಟಂಬರ್ 30 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: 080-25502520 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.