Home ಉದ್ಯೋಗಾವಕಾಶ ಗ್ರಂಥಾಲಯ ಮೇಲ್ವಿಚಾರಕರ ಹುದ್ದೆ: ಅರ್ಜಿ ಆಹ್ವಾನ

ಗ್ರಂಥಾಲಯ ಮೇಲ್ವಿಚಾರಕರ ಹುದ್ದೆ: ಅರ್ಜಿ ಆಹ್ವಾನ

425
0

ಉಡುಪಿ, ಅ.10: ಜಿಲ್ಲೆಯ ಉಡುಪಿ ತಾಲೂಕಿನ ಅಂಬಲಪಾಡಿ ಗ್ರಾಮ ಪಂಚಾಯತ್‌ನ ಗ್ರಂಥಾಲಯದಲ್ಲಿ ಖಾಲಿ ಇರುವ ಗ್ರಂಥಾಲಯ ಮೇಲ್ವಿಚಾರಕರು -1 ಹುದ್ದೆ (ಪ್ರವರ್ಗ-2(ಎ)-ಗ್ರಾಮೀಣ ಅಭ್ಯರ್ಥಿ) ಹಾಗೂ ಕುಂದಾಪುರ ತಾಲೂಕಿನ ಗುಲ್ವಾಡಿ (ಸಾಮಾನ್ಯ ಅಭ್ಯರ್ಥಿ-ಮಹಿಳೆ) ಮತ್ತು ಯಡಮೊಗೆ ಗ್ರಾಮ ಪಂಚಾಯತ್‌ನ (ಪ್ರವರ್ಗ-2(ಬಿ)-ಗ್ರಾಮೀಣ ಅಭ್ಯರ್ಥಿ) ಗ್ರಂಥಾಲಯಗಳಲ್ಲಿ ಖಾಲಿ ಇರುವ ಗ್ರಂಥಾಲಯ ಮೇಲ್ವಿಚಾರಕರು-ತಲಾ 1 ಹುದ್ದೆ ಸೇರಿದಂತೆ ಒಟ್ಟು 3 ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 25 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಮೀಪದ ಗ್ರಾಮ ಪಂಚಾಯತ್ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.