ಉಡುಪಿ, ಜ.7: ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ (ಹೆಚ್.ಏ.ಎಲ್) ಬೆಂಗಳೂರಿನಲ್ಲಿ ಮಾರ್ಚ್ 2025 ರಿಂದ ಪ್ರಾರಂಭವಾಗುವ ಬ್ಯಾಚ್‌ಗಾಗಿ ವಿವಿಧ ಟ್ರೇಡ್‌ಗಳಲ್ಲಿ ಅಪ್ರೆಂಟಿಷಿಪ್ ತರಬೇತಿ ಪಡೆಯಲು ಐ.ಟಿ.ಐ ಉತ್ತೀರ್ಣರಾದ ಅರ್ಹ ಅಭ್ಯರ್ಥಿಗಳಿಂದ ಒಂದು ವರ್ಷದ ಅಪ್ರೆಂಟಿಷಿಪ್ ತರಬೇತಿಗಾಗಿ ಅರ್ಜಿ ಅಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜನವರಿ 22 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ರಜತಾದ್ರಿ, ಮಣಿಪಾಲ, ಉಡುಪಿ ಸಹಾಯವಾಣಿ ಸಂಖ್ಯೆ: 0820-2574869 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ಅಪ್ರೆಂಟಿಷಿಪ್ ತರಬೇತಿ: ಅರ್ಜಿ ಆಹ್ವಾನ
ಅಪ್ರೆಂಟಿಷಿಪ್ ತರಬೇತಿ: ಅರ್ಜಿ ಆಹ್ವಾನ
Date: