ಉಡುಪಿ, ಜ.19: ಕೃಷಿ ಇಲಾಖೆಯ ವತಿಯಿಂದ ಅನುಷ್ಟಾನಗೊಳಿಸುತ್ತಿರುವ ಆಹಾರ ಮತ್ತು ಪೌಷ್ಟಿಕ ಭದ್ರತೆ (ಎಫ್.ಎನ್.ಎಸ್) ಯೋಜನೆಯಡಿ ತಾಂತ್ರಿಕ ಸಹಾಯಕರ ಹುದ್ದೆಯನ್ನು ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲು ಬಿ.ಎಸ್.ಸಿ (ಕೃಷಿ) ಪದವೀಧರರಾಗಿರುವ, ಉತ್ತಮ ಕಂಪ್ಯೂಟರ್ ಜ್ಞಾನ ಹೊಂದಿರುವ ಹಾಗೂ ಕೃಷಿ ಸಂಶೋಧನೆ ಮತ್ತು ಕೃಷಿ ವಿಸ್ತರಣಾ ಕಾರ್ಯಕ್ರಮದಲ್ಲಿ ಅನುಭವ ಇರುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಜನವರಿ 22 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಂಟಿ ಕೃಷಿ ನಿರ್ದೇಶಕರು, ಸಿ ಬ್ಲಾಕ್, 2 ನೇ ಮಹಡಿ, ಕೊಠಡಿ ಸಂಖ್ಯೆ: ಸಿ-304, ರಜತಾದ್ರಿ, ಮಣಿಪಾಲ, ಉಡುಪಿ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.
ತಾಂತ್ರಿಕ ಸಹಾಯಕರ ಹುದ್ದೆ: ಅರ್ಜಿ ಅಹ್ವಾನ
ತಾಂತ್ರಿಕ ಸಹಾಯಕರ ಹುದ್ದೆ: ಅರ್ಜಿ ಅಹ್ವಾನ
Date: