Saturday, March 1, 2025
Saturday, March 1, 2025

ಫೆ. 19: ಅಜ್ಜರಕಾಡು ಕಾಲೇಜಿನಲ್ಲಿ ಜಿಲ್ಲಾಮಟ್ಟದ ಕೌಶಲ್ಯ ರೋಜ್‌ಗಾರ್ ಮೇಳ

ಫೆ. 19: ಅಜ್ಜರಕಾಡು ಕಾಲೇಜಿನಲ್ಲಿ ಜಿಲ್ಲಾಮಟ್ಟದ ಕೌಶಲ್ಯ ರೋಜ್‌ಗಾರ್ ಮೇಳ

Date:

ಉಡುಪಿ, ಜ.27: ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ (ಕೆ.ಎಸ್.ಡಿ.ಸಿ) ಬೆಂಗಳೂರು, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕೌಶಲ್ಯಾ ಮಿಷನ್ ಹಾಗೂ ಡಾ.ಜಿ.ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು, ಅಜ್ಜರಕಾಡು, ಉಡುಪಿ ಇವರುಗಳ ಸಹಯೋಗದೊಂದಿಗೆ ಉದ್ಯೋಗಾಕಾಂಕ್ಷಿಗಳಿಗೆ ಉದ್ಯೋಗಾವಕಾಶವನ್ನು ನೀಡುವ ಸಲುವಾಗಿ ಜಿಲ್ಲಾ ಮಟ್ಟದ ಕೌಶಲ್ಯ ರೋಜ್‌ಗಾರ್ ಮೇಳ ಕಾರ್ಯಕ್ರಮವು ಫೆಬ್ರವರಿ 19 ರಂದು ನಗರದ ಅಜ್ಜರಕಾಡು ಡಾ.ಜಿ ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯಲಿದೆ. ಎಲ್ಲಾ ವಿದ್ಯಾರ್ಹತೆಯ ಉದ್ಯೋಗಾಕಾಂಕ್ಷಿಗಳು ಈ ಉದ್ಯೋಗ ಮೇಳದ ಸದುಪಯೋಗ ಪಡೆದುಕೊಳ್ಳಬಹುದು ಹಾಗೂ
https://udupi.nic.in ಲಿಂಕ್ ಮೂಲಕ ನೋಂದಣಿ ಮಾಡಿಕೊಳ್ಳಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಹಾಗೂ ಉಚಿತವಾಗಿ ನೋಂದಣಿ ಮಾಡಿಕೊಳ್ಳಲು ಜಿಲ್ಲಾ ಕೌಶಲ್ಯಾಭಿವೃದ್ದಿ ಅಧಿಕಾರಿಗಳ ಕಛೇರಿ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ನಂ:201, ಬಿ ಬ್ಲಾಕ್, ಮೊದಲನೇ ಮಹಡಿ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 9449943882, 9481456741, 9964428002 ಹಾಗೂ 9481510655 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಬ್ರಹ್ಮಾವರ: ವಾಹನ ಸಂಚಾರದಲ್ಲಿ ಬದಲಾವಣೆ

ಉಡುಪಿ, ಫೆ.27: ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಆರೂರು-ಮುಂಡ್ಕಿನಜೆಡ್ಡು-ಕೊಕ್ಕರ್ಣೆ-ನಾಲ್ಕೂರು (ಕೊಕ್ಕರ್ಣೆ- ನಾಲ್ಕೂರು ರಸ್ತೆ)...

ಹೀಟ್ ವೇವ್ (ಶಾಖದ ಹೊಡೆತ): ಸಾರ್ವಜನಿಕರು ರಕ್ಷಿಸಿಕೊಳ್ಳಲು ಸಲಹೆ-ಸೂಚನೆಗಳು

ಉಡುಪಿ, ಫೆ.27: ಪ್ರಸ್ತುತ ಹಾಗೂ ಮುಂಬರುವ ಬೇಸಿಗೆ ದಿನಗಳಲ್ಲಿ ಸೂರ್ಯನ ಶಾಖ...

ಮಲಬಾರ್ ವಿಶ್ವರಂಗ ಪುರಸ್ಕಾರಕ್ಕೆ ಐವರು ಹಿರಿಯ ರಂಗಕರ್ಮಿಗಳು ಆಯ್ಕೆ

ಉಡುಪಿ, ಫೆ.27: ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿ ಹಾಗೂ ಮಲಬಾರ್...

ಹ್ಯೂಮನ್ ರೈಟ್ಸ್ ಫೆಡರೇಶನ್ ಆಫ್ ಇಂಡಿಯಾ ಉಡುಪಿ ವಿಭಾಗ ಅಧ್ಯಕ್ಷರಾಗಿ ಉದಯ ನಾಯ್ಕ್ ಆಯ್ಕೆ

ಉಡುಪಿ, ಫೆ.27: ಹ್ಯೂಮನ್ ರೈಟ್ಸ್ ಫೆಡರೇಶನ್ ಆಫ್ ಇಂಡಿಯಾ ಉಡುಪಿ ವಿಭಾಗಕ್ಕೆ...
error: Content is protected !!