Saturday, February 22, 2025
Saturday, February 22, 2025

ಯುವ ಪರಿವರ್ತಕರ ಹುದ್ದೆ: ಅರ್ಜಿ ಆಹ್ವಾನ

ಯುವ ಪರಿವರ್ತಕರ ಹುದ್ದೆ: ಅರ್ಜಿ ಆಹ್ವಾನ

Date:

ಉಡುಪಿ, ಫೆ.14: ಕರ್ನಾಟಕ ಸರ್ಕಾರ ಮತ್ತು ಜನ ಆರೋಗ್ಯ ಕೇಂದ್ರ, ಎಪಿಡೀಮಿಯಾಲಜಿ ವಿಭಾಗ, ನಿಮ್ಹಾನ್ಸ್, ಬೆಂಗಳೂರು ಇವರುಗಳ ಸಂಯುಕ್ತಾಶ್ರಯದಲ್ಲಿ ಯುವ ಸ್ಪಂದನ ಕಾರ್ಯಕ್ರಮವನ್ನು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅನುಷ್ಠಾನಗೊಳಿಸಲಾಗಿದ್ದು, ಈ ಯೋಜನೆ ಮೂಲಕ ಯುವಜನರ ಮಾನಸಿಕ ಆರೋಗ್ಯಕ್ಕೆ ಪೂರಕ ಸೇವೆಗಳನ್ನು ಒದಗಿಸಲಾಗುತ್ತಿದೆ. ಜಿಲ್ಲೆಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಯುವ ಸ್ಪಂದನ ಕೇಂದ್ರದಲ್ಲಿ ಗೌರವಧನದ ಆಧಾರದ ಮೇರೆಗೆ ಯುವ ಪರಿವರ್ತಕರ ಹುದ್ದೆಗೆ ನೇಮಕ ಮಾಡಿಕೊಳ್ಳಲು ಯಾವುದೇ ಪದವಿ ಹಾಗೂ ಮೇಲ್ಪಟ್ಟು ವಿದ್ಯಾರ್ಹತೆ ಹೊಂದಿರುವ, ಕನಿಷ್ಠ 21 ರಿಂದ 35 ವರ್ಷದ ಒಳಗಿನ, ಕನ್ನಡ ಸ್ಪಷ್ಟವಾಗಿ ಮಾತನಾಡುವ ಹಾಗೂ ಸಂವಹನ ಕಲೆ ಕೌಶಲ್ಯ ಹೊಂದಿರುವ ಆಸಕ್ತ ಯುವಕ ಹಾಗೂ ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹತಾ ಮಾನದಂಡಗಳನ್ನು ಹೊಂದಿದ ಅಭ್ಯರ್ಥಿಗಳು ಅರ್ಜಿಯನ್ನು ಬಿಳಿಹಾಳೆಯಲ್ಲಿ ಸಂಪೂರ್ಣ ಹೆಸರು, ವಯಸ್ಸು, ವಿಳಾಸ ಹಾಗೂ ತಮ್ಮ ಮೂಲ ದಾಖಲಾತಿಗಳನ್ನು ಫೆಬ್ರವರಿ 28 ರ ಸಂಜೆ 5 ಗಂಟೆಯ ಒಳಗಾಗಿ ಖುದ್ದಾಗಿ ಉಪ ನಿರ್ದೇಶಕರ ಕಛೇರಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಅಜ್ಜರಕಾಡು, ಉಡುಪಿ ಇಲ್ಲಿಗೆ ಸಲ್ಲಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅಡ್ವಕೇಟ್‌ ಡಿ. ಕೆ. ಶೆಟ್ಟಿ ನೋಟರಿ ಪಬ್ಲಿಕ್‌ ಆಗಿ ನೇಮಕ

ಮುಂಬಯಿ, ಫೆ.21: ಮುಂಬಯಿಯ ಹಿರಿಯ ವಕೀಲ ಅಡ್ವಕೇಟ್‌ ಡಿ. ಕೆ. ಶೆಟ್ಟಿ...

ರೆಡಿಮಿಕ್ಸ್ ಕಾಂಕ್ರೀಟ್ ಘಟಕಗಳ ಅಧಿಕಾರಿಗಳೊಂದಿಗೆ ಸಭೆ

ಉಡುಪಿ, ಫೆ.21: ಮಣಿಪಾಲ ಕೈಗಾರಿಕಾ ಪ್ರದೇಶದಲ್ಲಿ ಕಾರ್ಯಚರಿಸುವ ರೆಡಿಮಿಕ್ಸ್ ಕಾಂಕ್ರೀಟ್ ಘಟಕಗಳ...

ಆಗಮಡಂಬರ ಕೃತಿ ಲೋಕಾರ್ಪಣೆ

ಉಡುಪಿ, ಫೆ.21: ಪರ್ಯಾಯ ಶ್ರೀ ಪುತ್ತಿಗೆ ಶ್ರೀ ಕೃಷ್ಣ ಮಠ ಉಡುಪಿ...

ವಿಕಾಸಕ್ಕಾಗಿ ಜಾನಪದ

ಉಡುಪಿ, ಫೆ.21: ಉಡುಪಿ ಕುಂಜಿಬೆಟ್ಟು ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನಲ್ಲಿ ಕನ್ನಡ...
error: Content is protected !!